AfterAfter linking Aadhaar, the compensation money will reach the farmers :- ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ಮೊದಲನೇ ಕಂತಿನ ಬರ ಪರಿಹಾರ ಹಣವನ್ನು ಯಾವಾಗ ಹಾಕುತ್ತಾರೆ?? ಎಷ್ಟು ಜನ ರೈತರಿಗೆ ಸಿಗಲಿದೆ ಮೊದಲ ಕಂತಿನ ಬರ ಪರಿಹಾರ ಹಣ??

ರಾಜ್ಯದ ರೈತರಿಗೆ ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಆಧಾರ್ ಲಿಂಕ್ ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ. ಆಧಾರ್ ಲಿಂಕ್ ಆಗದ ರೈತರು ತಕ್ಷಣ ಲಿಂಕ್ ಮಾಡಿಸಬೇಕು.

https://twitter.com/CMofKarnataka/status/1742109158361780275?t=iWHci46UUjATzAPyFevW9w&s=19

ದಯವಿಟ್ಟು ಈ ಲೇಖನವನ್ನು ಕೊನೆಯವರೆಗೆ ಓದಿ ತಪ್ಪದೇ ಶೇರ್ ಮಾಡಿ 🙏🏻🙏🏻..

ಬೆಂಗಳೂರು: ಬರ ಘೋಷಿತ 223 ತಾಲೂಕುಗಳ ರೈತರಿಗೆ ಮೊದಲ ಕಂತಿನಲ್ಲಿ ಗರಿಷ್ಠ 2 ಸಾವಿರ ರೂ.ವರೆಗೆ ಬೆಳೆ ನಷ್ಟ ಪರಿಹಾರ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ರೈತರಿಗೆ ಮೊದಲ ಬರ ಪರಿಹಾರ: ಮುಂದಿನ ವಾರದೊಳಗೆ ವಿತರಣೆಗೆ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚನೆ

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಬೆಳೆ ನಾಶದಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ಈಗಾಗಲೇ ಸರ್ಕಾರ ಘೋಷಿಸಿರುವ ರೂ.2,000 ವರೆಗಿನ ಮೊದಲ ಹಂತದ ಪರಿಹಾರವನ್ನು ಮುಂದಿನ ವಾರದೊಳಗೆ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

1 ನೇ ಕಂತಿನ ಬರ ಪರಿಹಾರ ವರ್ಗಾವಣೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದ್ದು ಈ ಹಣ ತುಂಬಾ ಕಡಿಮೆ ಇರುವುದರಿಂದ ರೈತರಲ್ಲಿ ನಿರಾಸೆ ಮೂಡಿದೆ.

➡️ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ತಪ್ಪದೇ ನಿಮಗೆ ಬರ ಪರಿಹಾರ ಹಣ ಜಮೆಯಾಗುತ್ತದೆ??

ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮಗೆ ಹಣ ಬರುತ್ತದೆ ಇಲ್ಲವೋ ಅಥವಾ ನಿಮ್ಮ ಹೆಸರು ಇದರಲ್ಲಿ ಇದೆ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಿ?? 👇🏻

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service87/

ನಂತರ ಆ ಮುಖಪುಟದಲ್ಲಿ ಕಾಣುವ ಹಾಗೆ ನಿಮ್ಮ ಜಿಲ್ಲೆ, ತಾಲೂಕು,ಹೋಬಳಿ, ನಿಮ್ಮ ಗ್ರಾಮ, ವರ್ಷ, ಸೀಸನ್ (Kharif), ಹಾಗೂ calamity type (drought)ಆಯ್ಕೆ ಮಾಡಿಕೊಂಡು. ನಂತರ Get report ಮೇಲೆ ಕ್ಲಿಕ್ ಮಾಡಿ..

ರೈತರಿಗೆ ಮೊದಲನೇ ಕಂತಿನ ಬರ ಪರಿಹಾರದ ಹಣ ವರ್ಗಾವಣೆ ಕುರಿತು ಸಿಎಂ ಸಿದ್ದರಾಮಯ್ಯನವರು ಹಂಚಿಕೊಂಡಿರುವ ಮಾಹಿತಿಯ ಪ್ರಕಾರ ಅರ್ಹ ರೈತರಿಗೆ 1 ಕಂತಿನಲ್ಲಿ ರೂ 2,000 ಹಣ ಸಿಗಲಿದೆ..

ಮೊದಲ ಕಂತಿನ ಹಣ ವರ್ಗಾವಣೆ ಬಗ್ಗೆ ಸುದೀರ್ಘ ವಿವರಣೆಯೊಂದಿಗೆ ಎಲ್ಲಾ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯನವರು ಬರ ಪರಿಹಾರ ಬಿಡುಗಡೆ ಕುರಿತು ಕೇಂದ್ರ ಸರ್ಕಾರಕ್ಕೆ ಅನೇಕ ಬಾರಿ ಬರೆದ ಪತ್ರಗಳಿಗೆ ಇಲ್ಲಿಯವರೆಗು ಯಾವುದೇ ಯಾವುದೇ ತರಹದ ಸ್ಪಂದನೆ ಸಿಕ್ಕಿಲ್ಲ ಹಾಗೂ ಯಾವುದೇ ಪ್ರತಿಕ್ರಿಯೆ ತಿರುಗಿ ಬಂದಿರುವುದಿಲ್ಲ..

ಈ ಹಿಂದೆ ರಾಜ್ಯದಿಂದ 3 ಸಚಿವರನ್ನು ದೆಹಲಿಗೆ ಕೇಂದ್ರ ಸರ್ಕಾರದ ಸಚಿವರೊಂದಿಗೆ ಪರಿಹಾರ ಬಿಡುಗಡೆ ಕುರಿತು ಚರ್ಚೆಗೆ ಮಾಡಲು ಕಳುಹಿಸಿದರು ಆದರು ಕೂಡ ಒಳ್ಳೆಯ ಫಲಿತಾಂಶ ಸಿಕ್ಕಿಲ್ಲ ಎಂದು ಎಕ್ಸ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದು ಈ ಕುರಿತು ಹೆಚ್ಚು ಮಾಹಿತಿ ತಿಳಿಸಿರುವ ಅವರು ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಬರ ಪರಿಹಾರ ಹಣ ವರ್ಗಾವಣೆಯ ಬಗ್ಗೆ ಇನ್ನೂ ಸಹ ಪ್ರಾಥಮಿಕ ಸಭೆ ನಡೆಯದಿರುವ ಹಿನ್ನೆಲೆಯಲ್ಲಿ.

ರಾಜ್ಯ ಸರ್ಕಾರದಿಂದ ರೈತರಿಗೆ ತುರ್ತು ಪರಿಸ್ಥಿತಿಗೆ ಅರ್ಥಿಕವಾಗಿ ನೆರವು ನೀಡುವ ನಿಟ್ಟಿನಲ್ಲಿ ಮೊದಲ ಕಂತಿನಲ್ಲಿಯೇ ಅರ್ಹ ರೈತರಿಗೆ ತಲಾ 2,000 ರೂ ವರೆಗೆ ಬೆಳೆ ಹಾನಿ ಪರಿಹಾರದ ಹಣವನ್ನು ಬಿಡುಗಡೆ ಮಾಡಿದೆ.

ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/BV4GiFXeLXJKfXFJFZSiGj

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು.

ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

➡️ ಆಧಾರ್ ಲಿಂಕ್ ಆದ ಖಾತೆಗೆ ಮಾತ್ರ ಬರ ಪರಿಹಾರ ಹಣವನ್ನು ಹಾಕುತ್ತಾರೆ👇🏻 ಸಿಎಂ ಸಿದ್ದರಾಮಯ್ಯ ಹೇಳಿಕೆ👇🏻 https://krushivahini.com/2024/01/05/adhaar-link-is-mandatory-to-get-drought-relief-amount/

Leave a Reply

Your email address will not be published. Required fields are marked *