Drought farmers loan waiver news :- ಬೆಂಗಳೂರು: ಬರಗಾಲ ಇದ್ದರೂ ರೈತರ ಕೃಷಿ ಸಾಲ ಮನ್ನಾ ಮಾಡಲು ಸಾಧ್ಯವಿಲ್ಲ ಎಂದು ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.
ಈ ಹಿಂದೆ ರೈತರ ಸಾಲ ಮನ್ನಾ ಮಾಡಿದರೂ ಅದು ಪರಿಪೂರ್ಣವಾಗಿ ಜಾರಿಗೆ ಬಂದಿಲ್ಲ. ಸಣ್ಣ ಮತ್ತು ಮಧ್ಯಮ ರೈತರು ಆಧಾರ್ ಜೋಡಣೆ ಮಾಡದೇ ಇರುವುದು, ಪಡಿತರ ಚೀಟಿಗೂ ಆಧಾರ್‌ಗೂ ತಾಳೆಯಾಗದ ಕಾರಣ ಸಾಲ ಮನ್ನಾದಡಿ ಸಹಕಾರ ಬ್ಯಾಂಕ್‌ಗಳಿಗೆ ಇನ್ನೂ ₹388 ಕೋಟಿ ಪಾವತಿ ಮಾಡಲು ಸಾಧ್ಯವಾಗಿಲ್ಲ ಎಂದು ಹೇಳಿದರು.
ರೈತರು ಪಡೆದ ಸಾಲವನ್ನು ನಿಗದಿತ ಅವಧಿಯೊಳಗೆ ಕಟ್ಟಿದರೆ ಬಡ್ಡಿ, ಚಕ್ರ ಬಡ್ಡಿಯಿಂದ ರಿಯಾಯ್ತಿ ನೀಡಲು ತೀರ್ಮಾನಿಸಲಾಗಿದೆ. ರೈತರು ಇದರ ಪ್ರಯೋಜನ ಪಡೆಯಬೇಕು. ಆದರೆ ಕೊನೆ ದಿನಾಂಕ ವಿಸ್ತರಿಸುವುದಿಲ್ಲ. ಈ ಯೋಜನೆಯನ್ನು ರೈತರು ಬಳಸಿಕೊಂಡರೆ ಸರ್ಕಾರಕ್ಕೆ ₹540 ಕೋಟಿ ಬೇಕಾಗುತ್ತದೆ ಎಂದೂ ತಿಳಿಸಿದರು.
ನಿಮಗೆ ತಿಳಿದ ಹಾಗೆ 2018 ರಲ್ಲಿ 1 ಲಕ್ಷ ರೂಪಾಯಿಯವರೆಗೆ ರೈತರಿಗೆ ಬೆಳೆ ಸಾಲ ಮನ್ನಾ ಘೋಷಣೆ ಮಾಡಲಾಗಿತ್ತು. ಆಗ ತಾಂತ್ರಿಕ ಸಮಸ್ಯೆ ಯಿಂದ ಕೆಲವು ರೈತರಿಗೆ ಸಾಲಮನ್ನಾ ಭಾಗ್ಯ ಸಿಕ್ಕಿರಲಿಲ್ಲ. ನಂತರ ಕೆಲವು ರೈತರ ದಾಖಲೆಗಳು ಸರಿಪಡಿಸಿದ್ದರಿಂದ ಅವರಿಗೆ ಸಾಲಮನ್ನಾ ಆಗಿತ್ತು. ಆದರೆ ಇನ್ನೂ ಕೆಲವು ರೈತರಿಗೆ ಸಾಲ ಮನ್ನಾ ಆಗಿಲ್ಲ. ಯಾವ ಯಾವ ರೈತರು ಸಾಲಮನ್ನಾ ಪಟ್ಟಿಯಲ್ಲಿದ್ದಾರೆ ಎಂಬುದನ್ನು ಈ ಕೆಳಗಿನಂತೆ ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಿ 👇🏻
➡️ ವಾಣಿಜ್ಯ ಬ್ಯಾಂಕ್ ಸಾಲ ಪಡೆದ ರೈತರ ಪಟ್ಟಿ ಯನ್ನು ಇಲ್ಲಿ ನೋಡಿ?? ನಿಮ್ಮ ಹೆಸರಿದೆಯೆ ಇಲ್ಲಿ ಚೆಕ್ ಮಾಡಿಕೊಳ್ಳಿ..
ನಂತರ ಅಲ್ಲಿ ರೈತ ಎಂದು ಸೆಲೆಕ್ಟ್(select) ಮಾಡಿಕೊಳ್ಳಿ
ನಂತರ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಮತ್ತು ಗ್ರಾಮವನ್ನು ಆಯ್ಕೆ ಮಾಡಿಕೊಂಡು ಸಲ್ಲಿಸು” ಮೇಲೆ ಒತ್ತಿರಿ..
* ಪ್ರಾಥಮಿಕ ಕೃಷಿ ಸಹಕಾರಿ ಸಂಘಗಳ ನಿಮ್ಮ ಸಾಲ ಮನ್ನಾ ಎಷ್ಟು ಆಗಿದೆ ಎಂದು ಇಲ್ಲಿ ಚೆಕ್ ಮಾಡಿಕೊಳ್ಳಿ..
ನಂತರ ಅಲ್ಲಿ ರೈತ ಎಂದು ಸೆಲೆಕ್ಟ್(select) ಮಾಡಿಕೊಳ್ಳಿ
ನಂತರ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಮತ್ತು ಗ್ರಾಮವನ್ನು ಆಯ್ಕೆ ಮಾಡಿಕೊಂಡು ಸಲ್ಲಿಸು” ಮೇಲೆ ಒತ್ತಿರಿ..
2018 ರಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಬೆಳೆ ಸಾಲಮನ್ನಾ ಘೋಷಣೆ ಮಾಡಿದ್ದರು. ಆ ಬೆಳೆ ಸಾಲಮನ್ನಾ ವರದಿಯನ್ನು ಚೆಕ್ ಮಾಡಬಹುದು. ಅದಾದ ನಂತರ ಬಿಜೆಪಿ ಸರ್ಕಾರವಾಗಲಿ ಅಥವಾ ಕಾಂಗ್ರೆಸ್ ಸರ್ಕಾರವಾಗಲಿ ರೈತರ ಬೆಳೆ ಸಾಲಮನ್ನಾ ಘೋಷಣೆ ಮಾಡಿಲ್ಲ. ಅದ ಕಾರಣ ಈಗ ರೈತರಿಗೆ ಯಾವುದೇ ತರಹದ ಬೆಳೆ ಸಾಲಮನ್ನಾಆಗಿಲ್ಲ.
ನಿಮಗೆ ಇನ್ನೂ ಆದರೂ ಬೆಳೆ ಸಾಲ ಮನ್ನಾ ಆಗಿಲ್ಲವೇ? ಏಕೆ ಬೆಳೆ ಸಾಲ ಮನ್ನಾ ಆಗಿಲ್ಲ?? ತಪ್ಪದೆ ತಿಳಿಯಿರಿ
ಬಹಳಷ್ಟು ರೈತರು ನಮ್ಮ ಬೆಳೆ ಸಾಲ ಮನ್ನಾ ಆಗಿಲ್ಲ ಎಂದು ಹೇಳುತ್ತಾರೆ. ಆದರೆ ಸಾಲ ಮನ್ನಾ ಮಾಡಲು ಕೆಲವು ದಾಖಲೆ ಮತ್ತು ಅರ್ಹತೆಗಳು ಮುಖ್ಯ,
ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಸಾಲ ಮನ್ನಾ ಆಗಲು ಬೇಕಾದ ದಾಖಲಾತಿಗಳು ಹಾಗೂ ಅರ್ಹತೆಗಳನ್ನು ಇಲ್ಲಿ ನೋಡಿ.
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಸಾಲ ಮನ್ನಾ ಆಗಲು ಬೇಕಾದ ಅರ್ಹತೆ ಹಾಗೂ ದಾಖಲಾತಿಗಳನ್ನು ನೋಡಬಹುದು. 👇🏻
https://mahitikanaja.karnataka.gov.in/department
ನಂತರ ಅಲ್ಲಿ ಕಾಣುವ “ಕಂದಾಯ ಇಲಾಖೆಯ” ಮೇಲೆ ಕ್ಲಿಕ್ ಮಾಡಬೇಕು..
ನಂತರ ಕಂದಾಯ ಇಲಾಖೆ ಸೇವೆಗಳು ಇದರ ಮೇಲೆ ಕ್ಲಿಕ್ ಮಾಡಿ
ನಂತರ clws ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ
ನಂತರ ಮುಂದಿನ ಮುಖಪುಟದಲ್ಲಿ ಕಾಣುವ ನಿಮ್ಮ ಜಿಲ್ಲೆ, ಮತ್ತು ಬ್ಯಾಂಕ್ ಸೆಲೆಕ್ಟ್ ಮಾಡಿ, ಸಲ್ಲಿಸು ಮೇಲೆ ಕ್ಲಿಕ್ ಮಾಡಿ.
ನಂತರ ಈ ಕೆಳಗೆ ಸೂಚಿಸಿರುವ ಸಾಲ ಮನ್ನಾ ಅರ್ಹತೆ ಹಾಗೂ ದಾಖಲೆಗಳನ್ನು ನೀವು ನೋಡಬಹುದು. ಹಾಗೂ ಸಾಲ ಮನ್ನಾ ಸ್ಥಿತಿ ಗತಿ ಯನ್ನು ಅಲ್ಲಿ ಕಾಣುತ್ತಿರಿ.
2018 ಕ್ಕಿಂತ ಹಿಂದೆ ಯಾರು ಯಾರು ಬೆಳೆ ಸಾಲ ಪಡೆದಿದ್ದರೋ ಅವರಲ್ಲಿ ಕೆಲವು ರೈತರಿಗೆ ಮಾತ್ರ ಬೆಳೆ ಸಾಲಮನ್ನಾ ಆಗಿದೆ. ಅದರಲ್ಲಿ ಇನ್ನೂ ಹಲವಾರು ರೈತರು ಆಧಾರ್ ಕಾರ್ಡ್, ರೇಶನ್ ಕಾರ್ಡ್, ಜಮೀನಿನ ದಾಖಲೆ ಹಾಗೂ ಬ್ಯಾಂಕ್ ಖಾತೆ ನಿಷ್ಕ್ರಿಯ ಹೀಗೆ ಕೆಲವು ತಾಂತ್ರಿಕ ಕಾರಣಗಳಿಂದ ಸಾಲಮನ್ನಾ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಕೆಲವು ರೈತರು ಸಾಲಮನ್ನಾ ಷರತ್ತಿಗೊಳಪಡದೆ ಇನ್ನೂ ವಂಚಿತರಾಗಿದ್ದಾರೆ.
ಕೊನೆಯದಾಗಿ ನಿಮ್ಮ ಆಧಾರ್ ನಂಬರ್ ಅನ್ನು ನಮೂದಿಸಿ ನಿಮ್ಮ ಬೆಳೆ ಸಾಲ ಎಷ್ಟು ಮನ್ನಾ ಆಗಿದೆ ಇಲ್ಲಿ ತಿಳಿದುಕೊಳ್ಳಿ 👇🏻
https://clws.karnataka.gov.in/clws/pacs/citizenreport/
ಮೊದಲಿಗೆ ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.
• ನಂತರ ಅಲ್ಲಿ CLWS (ನಾಗರಿಕರ ವರದಿ) ಎಂದು ಬರುತ್ತದೆ. ಅದರ ಮೇಲೆ ಕ್ಲಿಕ್ ಮಾಡಬೇಕು.
• ನಂತರ ಅಲ್ಲಿ ಬೆಳೆಸಾಲ ಮನ್ನಾ ವರದಿ ಎಂದು ಬರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ ತಿಳಿಯಬೇಕು.
• ನಂತರ ಅಲ್ಲಿ ಆಧಾರ್ ಕಾರ್ಡ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆಸಾಲ ಮನ್ನಾ ಬಗ್ಗೆ ಮಾಹಿತಿ ಪಡೆಯುವುದು.
ಈ ಹಿಂದೆ ಬಡ್ಡಿ ಮನ್ನಾ ಮಾಡಿದಾಗ ₹140 ಕೋಟಿ ಹೊರೆ ಆಗಿತ್ತು. ಎಲ್ಲ ರೈತರು ಸಾಲ ಮರುಪಾವತಿ ಮಾಡಿದರೆ ₹540 ಕೋಟಿ ಬೇಕಾಗುತ್ತದೆ. ಆದರೆ, ಶೇ 50ರಷ್ಟು ರೈತರು ಮಾತ್ರ ಸಾಲ ಮರುಪಾವತಿಸುವ ಸಾಧ್ಯತೆ ಇದೆ. ಆದ್ದರಿಂದ ಸರ್ಕಾರಕ್ಕೆ ₹200 ಕೋಟಿ ಹೊರೆ ಆಗಬಹುದೆಂದು ಅಂದಾಜು ಮಾಡಲಾಗಿದೆ ಎಂದು ರಾಜಣ್ಣ ವಿವರಿಸಿದರು.
ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ🙏🏻🙏🏻. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ
https://chat.whatsapp.com/D6bfj7BBl7lLxTGZOcd2Mh
ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು.
ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.