New ration card application 2024 :-
ನಮಸ್ಕಾರ ಆತ್ಮೀಯ ರೈತ ಬಾಂಧವರೇ ಬಿಪಿಎಲ್ ಕಾರ್ಡ್ ಹೊಂದಿದವರು ತಪ್ಪದೇ ಈ ಸೌಲಭ್ಯವನ್ನು ಪಡೆದುಕೊಳ್ಳಬೇಕಾಗಿ ತಿಳಿಸುತ್ತೇವೆ.
ರೇಷನ್ ಕಾರ್ಡ್ ಗೆ ಸಂಬಂಧಪಟ್ಟ ಹಾಗೆ ದಿನದಿಂದ ದಿನಕ್ಕೆ ಸಾಕಷ್ಟು ಚರ್ಚೆಗಳು ನಡೆಯುತ್ತಿದೆ ಅದರಂತೆ ಒಂದು ಕಡೆ ನಮ್ಮ ಬಳಿ ಇದ್ದಂತಹ ಬಿಪಿಎಲ್ ರೇಷನ್ ಕಾರ್ಡ್ ಅನ್ನು ನಾವೇನಾದರೂ ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳದೆ ಇದ್ದರೆ ಅಂಥವರ ರೇಷನ್ ಕಾರ್ಡ್ ಅನ್ನು ಸರ್ಕಾರ ರದ್ದುಗೊಳಿಸುತ್ತಿದೆ. ಇನ್ನೊಂದು ಕಡೆ ಇಷ್ಟು ದಿನಗಳು ಅರ್ಜಿ ಸಲ್ಲಿಸಿ ಕುಳಿತಿದ್ದ ಜನರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ನೀಡಲಾಗಿದ್ದು ಇನ್ನೇನು ಹೊಸ ರೇಷನ್ ಕಾರ್ಡ್ ಗಳನ್ನು ಕೆಲವೇ ದಿನಗಳಲ್ಲಿ ವಿತರಣೆ ಮಾಡಲಾಗುತ್ತದೆ.
ಹೊಸ ರೇಷನ್ ಕಾರ್ಡನ್ನು ಯಾವ ದಿನ ವಿತರಣೆ ಮಾಡಲಿದ್ದಾರೆ??
ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು ಯಾವುವು??
ಅರ್ಜಿಯನ್ನು ಯಾವ ದಿನಾಂಕದಂದು ಸಲ್ಲಿಸಬೇಕು ಮತ್ತು ಹೇಗೆ ಸಲ್ಲಿಸಬೇಕು??
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರಾರಂಭದಲ್ಲಿ ಘೋಷಣೆ ಮಾಡಲಾಗಿದ್ದ 5 ಗ್ಯಾರಂಟಿ ಯೋಜನೆಗಳನ್ನು ಒಂದಾದ ಮೇಲೆ ಒಂದರಂತೆ ಬಿಡುಗಡೆ ಮಾಡುತ್ತಾ ಬಂದಿದೆ ಅದರಂತೆ ಈ ಎಲ್ಲ ಯೋಜನೆಗಳು ಸಾಮಾನ್ಯ ಜನರಿಗೆ ಹಾಗೂ ಬಡತನ ರೇಖೆಗಿಂತ ಕೆಳಗಿರುವವರಿಗೆ ಹೆಚ್ಚಿನ ಅನುಕೂಲ ಮಾಡಿಕೊಟ್ಟಿವೆ ಎಂದು ಹೇಳಬಹುದು.
ಯಾರ ಬಳಿ ಬಿಪಿಎಲ್ ರೇಷನ್ ಕಾರ್ಡ್ ಹೊಂದಿಲ್ಲವೋ ಅಂತವರಿಗೆ ಹಲವು ಯೋಜನೆಗಳು ಸರ್ಕಾರದಿಂದ ಸಿಗದೇ ಇರಬಹುದು ಹೀಗಾಗಿ ರೇಷನ್ ಕಾರ್ಡ್ ಗೆ ಈಗಾಗಲೇ ಅರ್ಜಿ ಸಲ್ಲಿಸಿ ಕಾಯುತ್ತಿದ್ದವರಿಗೆ ಸಿಹಿಸುದ್ದಿ ಸಿಕ್ಕಿದೆ. ಕಳೆದ ಎರಡುವರೆ ವರ್ಷಗಳಿಂದ ಹೊಸ ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡಲಾಗದೆ ಹಾಗೆ ಉಳಿದಿದ್ದು ಇದೀಗ ಮೂರು ಲಕ್ಷದಷ್ಟು ಹೊಸ ಪಡಿತರ ಚೀಟಿಗಳನ್ನು ವಿತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಫಲಾನುಭವಿಗಳಿಗೆ ಅವರ ಆದಾಯಕ್ಕೆ ತಕ್ಕಂತೆ ಬಿಪಿಎಲ್ ಹಾಗೂ ಎಪಿಎಲ್ ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡಲಾಗುತ್ತದೆ.
ಇದನ್ನು ಓದಿರಿ :- 👉🏻ನಿಮ್ಮ ಫ್ರೂಟ್ಸ್ ಐ ಡಿ ಸ್ಟೇಟಸ್ ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಿ🙌🏻
ಅರ್ಜಿ ಸಲ್ಲಿಸಲು ಈ ಕೆಳಗೆ ಸೂಚಿಸಿದ ಸುಲಭ ವಿಧಾನ ಅನುಸರಿಸಿರಿ :
ಹೊಸದಾಗಿ ರೇಷನ್ ಕಾರ್ಡ್ ಏನಾದರೂ ಪಡೆದುಕೊಳ್ಳಲು ಬಯಸುತ್ತಿದ್ದರೆ ಅಂಥವರು ಈ ಕೂಡಲೇ ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅದರ ಜೊತೆಗೆ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಕೆಲವೊಂದು ತಿದ್ದುಪಡಿಗಳನ್ನು ಮಾಡಿಕೊಳ್ಳಲು ನೀವೇನಾದರೂ ಬಯಸುತ್ತಿದ್ದರೆ ಆ ಅವಕಾಶವೂ ಕೂಡ ನೀಡಲಾಗುತ್ತಿದ್ದು ತಮ್ಮ ಹತ್ತಿರದ ಗ್ರಾಮವನ್ ಕೇಂದ್ರಕ್ಕೆ ಭೇಟಿ ನೀಡಿ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅದರ ಜೊತೆಗೆ ಪಡಿತರ ಚೀಟಿಗೆ ಸಂಬಂಧಿಸಿದಂತೆ ನವೀಕರಣವನ್ನು ಕೂಡ ಅಭ್ಯರ್ಥಿಗಳು ಮಾಡಿಸಿಕೊಳ್ಳಬಹುದು.
ಪಡಿತರ ಚೀಟಿ ಪಡೆಯಲು ಬೇಕಾಗುವ ಅಗತ್ಯ ದಾಖಲೆಗಳು :-
ರಾಜ್ಯ ಸರ್ಕಾರದಿಂದ ಹೊಸದಾಗಿ ಪಡಿತರ ಚೀಟಿಯನ್ನು ಪಡೆದುಕೊಳ್ಳಲು ಯೋಚಿಸುತ್ತಿದ್ದರೆ ಕೆಲವೊಂದು ಪ್ರಮುಖ ದಾಖಲೆಗಳನ್ನು ಅಭ್ಯರ್ಥಿಗಳು ಹೊಂದಬೇಕಾಗುತ್ತದೆ ಆದ ದಾಖಲೆಗಳನ್ನು ಹೊಂದುವುದರ ಮೂಲಕ ಸುಲಭವಾಗಿ ಪಡಿತರ ಚೀಟಿಯನ್ನು ರಾಜ್ಯ ಸರ್ಕಾರದಿಂದ ಪಡೆದುಕೊಳ್ಳಬಹುದು ಅವುಗಳೆಂದರೆ,
ಆಧಾರ್ ಕಾರ್ಡ್
ಕುಟುಂಬದ ಸದಸ್ಯರ ಬಗ್ಗೆ ಇರುವಂತಹ ಎಲ್ಲಾ ಆಧಾರ್ ಕಾರ್ಡ್
ಜಾತಿ ಪ್ರಮಾಣ ಪತ್ರ
ಆದಾಯ ಪ್ರಮಾಣ ಪತ್ರ
ಆಧಾರ್ ಕಾರ್ಡಿಗೆ ಲಿಂಕ್ ಆಗಿರುವ ಮೊಬೈಲ್ ನಂಬರ್
ವಿಳಾಸ ಪುರಾವೆ..
ಇದನ್ನು ಓದಿರಿ :- ಹೊಲದ ಪಹಣಿಯ ಜೊತೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ! ಮೊಬೈಲ್ ನಲ್ಲಿ ಆಧಾರ್ ಗೆ ಪಹಣಿ ಲಿಂಕ್ ಮಾಡುವುದು ಹೇಗೆ ಇಲ್ಲಿ ನೋಡಿರಿ 👇🏻
ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದುವುದರ ಮೂಲಕ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕುಟುಂಬದಲ್ಲಿರುವ ಎಲ್ಲಾ ಸದಸ್ಯರು ಸೇವ ಕೇಂದ್ರಕ್ಕೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ತಿದ್ದುಪಡಿಗೆ ಮಾರ್ಚ್ 9 ರಿಂದ ಪ್ರಾರಂಭ :
ಪಡಿತರ ಚೀಟಿಗೆ ಸಂಬಂಧಿಸಿದಂತೆ ಏನಾದರೂ ಪರಿಸರ ಚೀಟಿಯಲ್ಲಿ ತಿದ್ದುಪಡಿಗಳು ಮಾಡಬೇಕೆಂದರೆ ಕೆಲವು ಜಿಲ್ಲೆಗಳಲ್ಲಿ ಮಾರ್ಚ್ 9ನೇ ತಾರೀಕಿನಿಂದ ಅವಕಾಶ ಕಲ್ಪಿಸಲಾಗಿದ್ದು ತಮ್ಮ ಹತ್ತಿರದ ಸೇವಾ ಕೇಂದ್ರದಲ್ಲಿ ಪರಿಸರ ಚೀಟಿಗೆ ಸಂಬಂಧಿಸಿ ದಂತೆ ಮಾಹಿತಿಯನ್ನು ಪಡೆದುಕೊಂಡು ಸ್ಥಳಕ್ಕೆ ಹೋಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಅಥವಾ ತಿದ್ದುಪಡಿಯನ್ನು ಕೂಡ ಮಾಡಿಸಿಕೊಳ್ಳಬಹುದಾಗಿದೆ.
ಹೀಗೆ ಹೊಸದಾಗಿ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಕಾಯುತ್ತಿರುವ ಜನರಿಗೆ ಸರ್ಕಾರವು ಇದೊಂದು ಸಹಿ ಸುದ್ದಿಯನ್ನು ನೀಡಿದೆ ಎಂದು ಹೇಳಬಹುದು ಹಾಗಾಗಿ ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ಕಳುಹಿಸುವುದರ ಮೂಲಕ ನೀವು ಕೂಡಲೇ ಅವರೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಬಯಸುತ್ತಿದ್ದರೆ ಇದೊಂದು ಸುವರ್ಣ ಅವಕಾಶವೆಂದು ತಿಳಿಸಿ ಅದರ ಜೊತೆಗೆ ಕೇವಲ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದಲ್ಲದೆ ರೇಷನ್ ಕಾರ್ಡ್ ನಲ್ಲಿ ಇರುವಂತಹ ವಿವರಗಳನ್ನು ಕೂಡ ತಿದ್ದುಪಡಿ ಮಾಡಬಹುದು ಎಂದು ತಿಳಿಸಿ ಧನ್ಯವಾದಗಳು.
ಅರ್ಜಿಯನ್ನು ಸಲ್ಲಿಸುವ ಡೈರೆಕ್ಟ್ ಲಿಂಕ್ : https://ahara.kar.nic.in/Home/EServices
ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ
https://chat.whatsapp.com/D6bfj7BBl7lLxTGZOcd2Mh
ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು.
ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.