Farmers informed to register under the Pradhan Mantri Crop Insurance Scheme :- ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು

ಪ್ರಧಾನಮಂತ್ರಿ ಫ‌ಸಲ್‌ ವಿಮಾ ಯೋಜನೆಯ ಅಡಿಯಲ್ಲಿ ಭತ್ತ ಬೆಳೆಯುವ ರೈತರು ನೋಂದಾಯಿಸಲು ತಿಳಿಸಲಾಗಿದೆ.

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫ‌ಸಲ್‌ ವಿಮಾ ಯೋಜನೆಯಡಿ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ ಭತ್ತ ಬೆಳೆಯುವ ರೈತರು ನೋಂದಾಯಿಸಿ ಕೊಳ್ಳುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಈ ಯೋಜನೆಯಡಿ ವಿಮಾ ಮೊತ್ತ ಪ್ರತೀ ಹೆಕ್ಟೇರ್‌ಗೆ 63,750 ರೂ.ಗಳಂತೆ ವಿಮಾ ಕಂತಿನ ದರವನ್ನು ಪ್ರತೀ ಹೆಕ್ಟೇರ್‌ಗೆ 1,275 ರೂ.ಗಳಂತೆ ನಿಗದಿಪಡಿಸಲಾಗಿದೆ. (ಅಥವಾ ವಿಮಾ ಕಂತು ಒಂದು ಎಕರೆಗೆ 516 ರೂ. ಇರುತ್ತದೆ ಹಾಗೂ ಒಟ್ಟು ವಿಮಾ ಮೊತ್ತ ಎಕರೆಗೆ 25,800 ರೂ. ಆಗಿರುತ್ತದೆ.) ನೋಂದಣಿಗೆ ಆ. 16 ಕೊನೆಯ ದಿನ ಆಗಿರುತ್ತದೆ.

ಇದನ್ನು ಓದಿರಿ :- 🌱ಪಿ ಎಮ್ ಕಿಸಾನ್ 17ನೇ ಕಂತಿನ ಹಣ ಈ ಪಟ್ಟಿಯಲ್ಲಿ ಇರುವವರಿಗೆ ಬರುವುದಿಲ್ಲ 👇🏻
➡️ ನಿಮ್ಮ ಹೆಸರು ಇದೆಯೇ ಚೆಕ್ ಮಾಡಿಕೊಳ್ಳಿ ✨
https://krushivahini.com/2024/06/14/is-pm-kisan-17th-installment-credited/
💙💜💚🌱

ಬೆಳೆ ವಿಮೆಗೆ ಎಲ್ಲಿ ಹಾಗೂ ಹೇಗೆ ನೋಂದಾಯಿಸಬೇಕು? ಬೇಕಾದ ಅಗತ್ಯ ದಾಖಲೆಗಳು ಯಾವುವು👇🏻

ಬೆಳೆ ಸಾಲ ಪಡೆಯದ ರೈತರು ಪಹಣಿ ಪತ್ರ, ಖಾತೆ ಪಾಸ್‌ ಪುಸ್ತಕ/ಬ್ಯಾಂಕ್‌ ಪಾಸ್‌ ಪುಸ್ತಕ, ಕಂದಾಯ ರಸೀದಿ ಮತ್ತು ಆಧಾರ್‌ ಸಂಖ್ಯೆಗಳನ್ನು ಒದಗಿಸಿ ವಾಣಿಜ್ಯ ಬ್ಯಾಂಕ್‌ಗಳು ಅಥವಾ ಗ್ರಾಮೀಣ ಮಟ್ಟದ ವ್ಯವಸಾಯ ಸೇವಾ ಸಹಕಾರ ಸಂಘಗಳು, ಸಾರ್ವಜನಿಕ ಸೇವಾ ಕೇಂದ್ರ, ಗ್ರಾಮ ಒನ್‌ ಮತ್ತು ವಿಮಾ ಸಂಸ್ಥೆಗಳನ್ನು ಸಂಪರ್ಕಿಸಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದು.

ಬೆಳೆ ವಿಮೆ ಮಾಡಿಸುವುದರಿಂದ ಪ್ರಯೋಜನಗಳು👇🏻

ಹವಾಮಾನ ವೈಪರೀತ್ಯಗಳಾದ ಹೆಚ್ಚಿನ ಮಳೆ, ನೆರೆ/ಪ್ರವಾಹದಿಂದ ಬೆಳೆ ಮುಳುಗಡೆ, ದೀರ್ಘ‌ಕಾಲ ತೇವಾಂಶ ಕೊರತೆ, ತೀವ್ರ ಬರಗಾಲ ಮುಂತಾದವುಗಳಿಂದ ಬಿತ್ತನೆಯಾದ ಒಂದು ತಿಂಗಳಿನಿಂದ ಕಟಾವಿನ 15 ದಿನ ಪೂರ್ವದವರೆಗಿನ ಬೆಳೆ ನಷ್ಟವಾಗಿ ನಿರೀಕ್ಷಿತ ಇಳುವರಿ, ಸಾಮಾನ್ಯ ಇಳುವರಿಯ ಶೇ. 50ಕ್ಕಿಂತ ಕಡಿಮೆ ಇದ್ದಲ್ಲಿ ಅಥವಾ ಬೆಳೆ ನಷ್ಟ ಕಂಡುಬಂದಲ್ಲಿ ವಿಮೆ ಮಾಡಿದ ರೈತರಿಗೆ ಅಂದಾಜು ಮಾಡಲಾದ ಬೆಳೆ ನಷ್ಟ ಪರಿಹಾರದಲ್ಲಿ ಶೇ. 25ರಷ್ಟು ಹಣ ಮುಂಚಿತವಾಗಿ ದೊರೆಯಲಿದೆ. ಬೆಳೆ ಕಟಾವಿನ ವಾಸ್ತವಿಕ ಇಳುವರಿ ಆಧಾರದ ಮೇಲೆ ಅಂತಿಮ ಬೆಳೆ ನಷ್ಟ ಪರಿಹಾರದಲ್ಲಿ ಹೊಂದಾಣಿಕೆ ಮಾಡಲಾಗುವುದು.

ಕಳೆದ ವರ್ಷ 2023-24ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ವಿಮೆ 1,62,071 ರೈತರಿಗೆ 1,86,850 ಹೆಕ್ಟರ್ ಪ್ರದೇಶ ಬೆಳೆ ವಿಮೆ ಯೋಜನೆಯಡಿ ನೊಂದಾಯಿತಗೊಂಡಿದ್ದು. ಅದರಲ್ಲಿ ವಿಮಾ ಸಂಸ್ಥೆಯಿಂದ 160.30 ಕೋಟಿ ರೂ ಹಾಕಲಾಗಿದೆ.

ನಿಮ್ಮ ಖಾತೆಗೆ ಎಷ್ಟು ಬೆಳೆ ವಿಮೆ ಹಣ ಜಮೆಯಾಗಿದೆ ಇಲ್ಲಿ ಚೆಕ್ ಮಾಡಿಕೊಳ್ಳಿ??

ಮೊದಲನೆಯದಾಗಿ ಈ ಕೆಳಗೆ ತೋರಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ ನಂತರ ನಾವು ಕೆಳಗೆ ಸೂಚಿಸಿದ ಎಲ್ಲ ಮಾಹಿತಿಗಳನ್ನು ಅದರಲ್ಲಿ ಹಾಕಿ ಗೋ ಎಂದು ಕ್ಲಿಕ್ ಮಾಡಿ..

https://samrakshane.karnataka.gov.in/

ವರ್ಷ ಹಾಗೂ ಋತು ಆಯ್ಕೆ ಮಾಡಿ

ವರ್ಷ:2023-24

ಋತು:kharif/ಮುಂಗಾರು

ಆನ್ಲೈನ್ ಮೂಲಕ ಹಣ ಜಮೆ ಆಗಿರುವುದನ್ನು ಸ್ಟೇಟಸ್ ಚೆಕ್ ಮಾಡುವುದು ಹೇಗೆ ಈ ಕೆಳಗಿಂನಂತೆ ನೋಡಿರಿ 👇🏻

ಡೈರೆಕ್ಟಾಗಿ ಲಿಂಕ್ ಗಾಗಿ ಕೆಳಗಡೆ ಕ್ಲಿಕ್ ಮಾಡಿ

https://samrakshane.karnataka.gov.in/Premium/CheckStatusMain_aadhaar.aspx

ಹಾಗಾಗಿ ನಿಮ್ಮ ಖಾತೆಗಳಿಗೂ ಜಮೆ ಆಗಿರಬಹುದು ಆದ ಕಾರಣ ಮೇಲೆ ತಿಳಿಸಿದಂತಹ ಸ್ಟೆಪ್ಸ್ ಗಳನ್ನು ಅನುಸರಿಸಿ ನಿಮಗೂ ಜಮೆಯಾಗಿದೆಯೋ ಇಲ್ಲವೋ ಚೆಕ್ ಮಾಡಿಕೊಳ್ಳಿ.

ನಿಮ್ಮ ಹೊಲದ ಸರ್ವೆ ನಂಬರ್ ನಮೂದಿಸಿ ನಿಮಗೆ ಎಷ್ಟು ಬೆಳವಿನೆ ಹಣ ಬಂದಿದೆ ಇಲ್ಲಿ ನೋಡಿ??

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಹೊಲದ ಸರ್ವೆ ನಂಬರನ್ನು ನಮೂದಿಸಿ ಬೆಳೆ ವಿಮೆ ಏನೇನೋ ಪರಿಸ್ಥಿತಿಯಾಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಪಡೆಯಿರಿ.

https://samrakshane.karnataka.gov.in/HomePages/AppliOnSurveyNos.aspx

ನಿಮ್ಮ ಜಿಲ್ಲೆಯ ಇನ್ಸೂರೆನ್ಸ್(insurance) ಕಂಪನಿ ಯಾವುದು ಎಂದು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ? ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಯಾವ ಜಿಲ್ಲೆಗೆ ಯಾವ ಇನ್ಶೂರೆನ್ಸ್ ಕಂಪನಿ ಇರುವ ಬಗ್ಗೆ ಮಾಹಿತಿಯನ್ನು ನೀವು ತಿಳಿದುಕೊಳ್ಳುತ್ತೀರಿ.👇🏻

https://samrakshane.karnataka.gov.in/HomePages/frmKnowYourInsCompany.aspx

ನಮ್ಮ ರಾಜ್ಯದಲ್ಲಿ ಇರುವಂತಹ ಇನ್ಸೂರೆನ್ಸ್ ಕಂಪನಿಗಳ ಪಟ್ಟಿ ಈ ಕೆಳಗಿನಂತಿವೆ👇🏻

Bajaj allianz GIC

SBI General Insurance

Future general India Insurance Company

HDFC ergo General Insurance Company Limited

Universal sompo GIC

SBI General Insurance

Agriculture insurance company of India

ICICI Lombard GIC

ಹೊಸ ಓಪನ್ ನಲ್ಲಿ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿ ಆಗ ನಿಮ್ಮ ಜಿಲ್ಲೆಯ ಇನ್ಸೂರೆನ್ಸ್ ಕಂಪನಿ ಯಾವುದು ಎಂಬುದರ ಬಗ್ಗೆ ಮಾಹಿತಿ ನಿಮಗೆ ಸಿಗುತ್ತದೆ.

ಇದನ್ನು ಓದಿರಿ :- ರೈತರಿಗೆ ಗುಡ್ ನ್ಯೂಸ್! ರೈತರಿಗೆ 3000 ರೂ ಬರ ಪರಿಹಾರ ಹಣ ಜಮೆ ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಹಣ ಬರುತ್ತದೆ..👇🏻

https://krushivahini.com/2024/06/12/government-providing-3000-as-crop-loss-compensation/

👉🏻 ನಿಮ್ಮ ಮೊಬೈಲ್ ನಲ್ಲಿ ನಿಮಗೆ ಎಷ್ಟು ಬೆಲೆಯನ್ನು ಹಣ ಬರುತ್ತದೆ ಎಂಬುದನ್ನು ಚೆಕ್ ಮಾಡಿಕೊಳ್ಳಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ 👇🏻

https://samrakshane.karnataka.gov.in/Premium/Premium_Chart.aspx

ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಗ್ರಾಮ ನಿಮ್ಮ ಬೆಳೆ ಯಾವುದು ಬೆಳೆಯ ವಿಸ್ತೀರ್ಣ ಎಷ್ಟು? ಎಲ್ಲವನ್ನೂ ಅಲ್ಲಿ ಆಯ್ಕೆ ಮಾಡಿಕೊಂಡು ನಂತರ premium check (ಪ್ರೈಮಿಯಂ ರಿಪೋರ್ಟ್ ) ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಎಷ್ಟು ಬೆಳೆ ವಿಮೆ ಹಣ ಬರುತ್ತದೆ ಎಂದು ತಿಳಿಯುತ್ತದೆ…

ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/D6bfj7BBl7lLxTGZOcd2Mh

ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿಕೊಳ್ಳಿ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

Leave a Reply

Your email address will not be published. Required fields are marked *