Weather Based Crop Insurance Status Check:- ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ಬೆಳೆ ವಿಮೆಯ ಕಂತು ಹೇಗೆ ತುಂಬಬೇಕು..

ಯಾವ ಬೆಳೆಗಳಿಗೆ ವಿಮೆ ಕಂತು ತುಂಬಬೇಕು?? ಈ ತೋಟಗಾರಿಕೆ ಬೆಳೆಗಳಿಗೆ ವಿಮೆ ತುಂಬಿ? ದಯವಿಟ್ಟು ಈ ಲೇಖನವನ್ನು ಸಂಪೂರ್ಣವಾಗಿ ಓದಿ ತಪ್ಪದೇ ಎಲ್ಲರಿಗೂ ಶೇರ್ ಮಾಡಿ🙏🏻!

ಹೌದು ರೈತ ಬಾಂಧವರೇ, 2024 25 ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯ ಅಡಿ ತೋಟಗಾರಿಕೆ ಬೆಳೆಗಳಾದ ಶುಂಠಿ ಹಸಿ ಮೆಣಸಿನಕಾಯಿ ಮಾವು ಮತ್ತು ಅಡಿಕೆ ಬೆಳೆಗಳಿಗೆ ವಿಮೆ ಮೊತ್ತವನ್ನು ನಿಗದಿತ ಅವಧಿ ಒಳಗೆ ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರ, CSC ಹಾಗೂ ಬ್ಯಾಂಕಗಳಿಗೆ ವಿಮೆಯನ್ನು ತುಂಬಬೇಕು. ವಿಮೆಯನ್ನು ತುಂಬಲು ಹಿರಿಯ ಸಹಕಾರ ತೋಟಗಾರಿಕಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೈತರು ತಪ್ಪದೇ ಬೆಳೆ ವಿಮೆಯನ್ನು ಜುಲೈ 31ರೊಳಗಾಗಿ ತುಂಬಬೇಕು. ನಿಮ್ಮ ಬೆಳೆಗಳನ್ನು ಬೆಳೆ ಸಮೀಕ್ಷೆ ಆಪ್ ಮೂಲಕ ಜುಲೈ 31ರ ಒಳಗಾಗಿ ಸಮೀಕ್ಷೆ ಕೈಗೊಳ್ಳಬೇಕು.
ನಂತರ ನೀವು ಬೆಳೆ ಸಮೀಕ್ಷೆ ಮಾಡದಿದ್ದರೆ ನಿಮಗೆ ಯಾವುದೇ ತರಹದ ಬೆಳೆಯುಮೆ ಬೆಳೆ ಹಾನಿ ಹಾಗೂ ಇತರೆ ಸರ್ಕಾರದ ವಿವಿಧ ಯೋಜನೆಗಳ ಸದುಭಯೋಗ ಪಡೆದುಕೊಳ್ಳಲು ತೊಂದರೆಯಾಗುತ್ತದೆ ಎಂದು ತೋಟಗಾರಿಕಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 🙏🏻

ಬೆಳೆ ಸಮೀಕ್ಷೆ ಪ್ರಯೋಜನಗಳ ವಿವರ:

1. ರೈತರ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ಮಾಹಿತಿಯನ್ನು ರೈತರೇ ದಾಖಲಿಸಬಹುದಾಗಿದೆ.

2. ಸದರಿ ಬೆಳ ಸಮೀಕ್ಷೆ ಮಾಹಿತಿಯನ್ನು ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ, ಬೆಂಬಲ ಬೆಲೆ, ಕೃಷಿ ಸಾಲ ಸೌಲಭ್ಯ ಮತ್ತು ಸರ್ಕಾರದ ವಿವಿಧ ಯೋಜನೆಗಳಡಿ ಸವಲತ್ತುಗಳನ್ನು ರೈತರಿಗೆ ಒದಗಿಸಲು ಮತ್ತು RTC ಯಲ್ಲಿ ಬೆಳೆ ಮಾಹಿತಿ ಅಳವಡಿಸಲು ಬಳಸಲಾಗುತ್ತದೆ.

ಬೆಳೆ ಸಮೀಕ್ಷೆ ಮಾಡುವ ವಿಧಾನ:

ರೈತರ ಪೂರ್ವ ಮುಂಗಾರು ಬೆಳೆ ಸಮೀಕ್ಷೆ 2023-24 ಆ್ಯಪ್‌ ಅಂದರೆ ಈ ಕೆಳಗೆ ಕೊಟ್ಟಿರುವ ಲಿಂಕನ್ನು ಉಪಯೋಗಿಸಿಕೊಂಡು ಪ್ಲೇ ಸ್ಟೋರ್ ನಲ್ಲಿ ಮೊದಲು ಈ ಆಪ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
https://play.google.com/store/apps/details?id=com.csk.farmer23_24.cropsurvey

ಡೌನ್ಲೋಡ್ ಮಾಡಿಕೊಂಡ ನಂತರ ಅಲ್ಲಿ ತೋರಿಸುವ ಮುಖಪುಟದಲ್ಲಿ ತಮ್ಮ ಆಧಾರ್ ಕಾರ್ಡ್ ನ ಮೂಲಕ EKYC ಪ್ರಕ್ರಿಯೆ ಪೂರ್ಣಗೊಳಿಸಿ ನೊಂದಾಯಿಸಿಕೊಂಡು ತಮ್ಮ ಜಮೀನಿನ ವಿವರಗಳನ್ನು ನಿಮ್ಮ ಹೊಲದ ಸರ್ವೆ ನಂಬರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕು. ಆನಂತರ ತಮ್ಮ ಜಮೀನುಗಳಿಗೆ ತೆರಳಿ ಸಂಬಂಧಪಟ್ಟ ಸರ್ವೆ ನಂಬರ್ ನಲ್ಲಿ ಬೆಳೆದಿರುವ ಬೆಳೆಗಳ ಛಾಯಾಚಿತ್ರಗಳನ್ನು ತೆಗೆದು ಅಪ್ ಲೋಡ್ ಮಾಡಬೇಕು..

ನಿಮ್ಮ ಬೆಳೆ ಸಮೀಕ್ಷೆಯ ಸ್ಟೇಟಸ್ ಹೀಗೆ ಚೆಕ್ ಮಾಡಿರಿ :-

ಹಂತ 1) ಮೊದಲಿಗೆ ಈ ಕೆಳಗೆ ಕೊಟ್ಟಿರುವ ಲಿಂಕ್ ಮೂಲಕ ಈ ಆಪ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
https://play.google.com/store/apps/details?id=com.crop.offcskharif_2021

➡️ ನಿಮ್ಮ ಪರಿಹಾರ ಹಣ ಜಮಾ ಆಗಿದ್ದರೆ ಸ್ಟೇಟಸ್ ಅನ್ನು ಹೀಗೆ ಚೆಕ್ ಮಾಡಿಕೊಳ್ಳಿ ಮೊದಲಿಗೆ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ..
https://landrecords.karnataka.gov.in/PariharaPayment/

ಈ ಮೇಲಿನ ಲಿಂಕನ್ನು ಕ್ಲಿಕ್ ಮಾಡಿದ ತಕ್ಷಣ ಅಲ್ಲಿ ಕಾಣಿಸುವ ಹಾಗೆ ಮೊದಲು ಆಧಾರ್ ನಂಬರನ್ನು ಆಯ್ಕೆ ಮಾಡಿಕೊಂಡು ನಂತರ ಅಲ್ಲಿ calamity type ಇದ್ದಲಿ drought ಎಂದು ಹಾಕಿ ವರ್ಷವನ್ನು ಆಯ್ಕೆ ಮಾಡಿಕೊಂಡು ವಿವರಗಳನ್ನು ಪಡೆಯಲು ವರ್ಷವನ್ನು ಆಯ್ಕೆ ಮಾಡಿ ಅಲ್ಲಿ ಕೊಟ್ಟಿರುವ ಕ್ಯಾಪ್ಚ ಎಂಟ್ರಿ ಮಾಡಿ ನಿಮ್ಮ ಪರಿಹಾರದ ಸ್ಟೇಟಸ್ ಅನ್ನು ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಿ.

➡️ ಇಲ್ಲಿಯವರೆಗೂ ನಿಮಗೆ ಎಷ್ಟು ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆ??

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service87/

ನಂತರ ಆ ಮುಖಪುಟದಲ್ಲಿ ಕಾಣುವ ಹಾಗೆ ನಿಮ್ಮ ಜಿಲ್ಲೆ, ತಾಲೂಕು,ಹೋಬಳಿ, ನಿಮ್ಮ ಗ್ರಾಮ, ವರ್ಷ, ಸೀಸನ್ (Kharif), ಹಾಗೂ calamity type (drought)ಆಯ್ಕೆ ಮಾಡಿಕೊಂಡು. ನಂತರ Get report ಮೇಲೆ ಕ್ಲಿಕ್ ಮಾಡಿ..

ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಹಳ್ಳಿಯ ಬೆಳೆ ಹಾನಿ ಜಮೆ ಆಗಿರುವ ರೈತರ ಪಟ್ಟಿ ಕಾಣುತ್ತದೆ.

> ಇಲ್ಲಿಯವರೆಗೂ ನಿಮಗೆ ಎಷ್ಟು ಬೆಳೆವಿಮೆ ಹಣ ಜಮೆಯಾಗಿದೆ ಚೆಕ್ ಮಾಡಿಕೊಳ್ಳಿ 👇🏻

ಆನ್ಲೈನ್ ಮೂಲಕ ಹಣ ಜಮೆ ಆಗಿರುವುದನ್ನು ಸ್ಟೇಟಸ್ ಚೆಕ್ ಮಾಡುವುದು ಹೇಗೆ ಈ ಕೆಳಗಿಂನಂತೆ ನೋಡಿರಿ 👇🏻

ಡೈರೆಕ್ಟಾಗಿ ಲಿಂಕ್ ಗಾಗಿ ಕೆಳಗಡೆ ಕ್ಲಿಕ್ ಮಾಡಿ

https://samrakshane.karnataka.gov.in/Premium/CheckStatusMain_aadhaar.aspx

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಯಾವುವು?
ರೈತರು ನಿಮ್ಮ ಆಧಾರ್ ಕಾರ್ಡ್, ನಿಮ್ಮ ಹೊಲದ ಪಹಣಿ ಪತ್ರ, ಬೆಳೆವಿಮೆ ತುಂಬುವ ಅರ್ಜಿ, ನಿಮ್ಮ ಹತ್ತಿರ ಇರುವ ಮೊಬೈಲ್ ಸಂಖ್ಯೆ, ನಿಮ್ಮ FID ನಂಬರ್ ಎಲ್ಲವನ್ನು ನೀವು ತೆಗೆದುಕೊಂಡು ಹೋಗಿ ಗ್ರಾಮವನ್ ಅಥವಾ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕಾಗಿ ವಿನಂತಿ.

ಕೃಷಿ ಆಧಾರಿತ ಇನ್ನೂ ಹೆಚ್ಚಿನ ಮಾಹಿತಿಗಾಗಿ ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ ತಪ್ಪದೇ ಕೃಷಿ ವಾಹಿನಿ ವಾಟ್ಸಪ್ ಗ್ರೂಪ್ ಸೇರಲು ಕೆಳಕಂಡ ಲಿಂಕ್ ಅನ್ನು ಒತ್ತಿ 👇🏻
https://chat.whatsapp.com/D6bfj7BBl7lLxTGZOcd2Mh

Leave a Reply

Your email address will not be published. Required fields are marked *