Bara parihara list 2024 :- ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ಬರ ಪರಿಹಾರ ಹಣ ಯಾರಿಗೆ ಬರುತ್ತದೆ ಎಂಬುದರ ಬಗ್ಗೆ ತಿಳಿಯೋಣ!
ಈಗಾಗಲೇ ಸರ್ಕಾರದಿಂದ ಬರ ಪರಿಹಾರ ಹಣ ರೈತರಿಗೆ ಜಮೆ ಆಗುತ್ತದೆ ಯಾರಿಗೆ ಬರ ಪರಿಹಾರ ಹಣ ಬರುತ್ತದೆ ಯಾರಿಗೆ ಹಣ ಬರುವುದಿಲ್ಲ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ 👇🏻
ನಿಮ್ಮ ಊರಿನಲ್ಲಿ ಈ ಜನರಿಗೆ ಬರ ಪರಿಹಾರ ಹಣ ಬರುತ್ತದೆ?? ಇಲ್ಲಿ ಚೆಕ್ ಮಾಡಿಕೊಳ್ಳಿ 👇🏻
ನಿಮ್ಮ ಮೊಬೈಲ್ ನಲ್ಲಿ ಫ್ರೂಟ್ಸ್ ಜಾಲತಾಣದ ಅಡಿಯಲ್ಲಿ ನೀವು ನಿಮ್ಮ ಜಿಲ್ಲೆಯ ಎಲ್ಲಾ ವಿವರವನ್ನು ಹಾಕಿ ಕೆಳಗೆ ಕೊಟ್ಟಿರುವ ಎಲ್ಲಾ ಹಂತಗಳನ್ನು ತಪ್ಪದೇ ಪಾಲಿಸಿ, ಹಳ್ಳಿಯವರು ರೈತರ ಪಟ್ಟಿ ಬಿಡುಗಡೆಯಾಗಿದೆ ಅದರಲ್ಲಿ ನಿಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಿ.
ನಿಮ್ಮ ಹೆಸರನ್ನು ಚೆಕ್ ಮಾಡಲು ಈ ಕೆಳಗಿನ ಹಂತಗಳನ್ನು ಅನುಸರಿಸಿ!👇🏻
➡️ ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/FarmerDeclarationReport.aspx
ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಹಾಗೂ ನಿಮ್ಮ ಹಳ್ಳಿಯನ್ನು ಆಯ್ಕೆ ಮಾಡಿಕೊಂಡು. ವೀಕ್ಷಿಸು ಇದರ ಮೇಲೆ ಕ್ಲಿಕ್ ಮಾಡಿರಿ..
ಆ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಅಂತಹ ರೈತರಿಗೆ ಯಾವುದೇ ಕಾರಣಗಳಿಲ್ಲದೆ ಪರಿಹಾರದ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ಜಮೆ ಮಾಡಲಾಗುತ್ತದೆ.
ಹಂತ 2) :- ಅದೇ ರೀತಿಯಾಗಿ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ ನಿಮ್ಮ ಬರ ಪರಿಹಾರ ಹಣದ ಬಗ್ಗೆ ಮಾಹಿತಿ ಪಡೆಯಿರಿ.. ಈಗಾಗಲೇ ನಿಮಗೆ ತಿಳಿದ ಹಾಗೆ ಫ್ರೂಟ್ಸ್ ಐಡಿಯನ್ನು ಎಲ್ಲ ರೈತರಿಗೆ ಕಡ್ಡಾಯವಾಗಿ ಮಾಡಿದೆ. ಕೇವಲ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸುವುದರ ಮೂಲಕ ನಿಮ್ಮ ಫ್ರೆಂಡ್ಸ್ ಐ ಡಿ ಜನರೇಟ್ ಆಗಿದಿಯೋ ಇಲ್ಲವೋ ನಿಮ್ಮ Data ಸ್ಥಿತಿಯನ್ನು ಅಲ್ಲೇ ತಿಳಿಯಿರಿ…
Step 1:- ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಆಧಾರ್ ಸಂಖ್ಯೆಯನ್ನು ಅಲ್ಲಿ ನಮೂದಿಸಿ ಸರ್ಚ(search) ಬಟನ್ ಮೇಲೆ ಒತ್ತಬೇಕು..
Step 2:- ಅದೇ ರೀತಿಯಾಗಿ ನಿಮಗೆ ಕೆಳಗೆ ತೋರಿಸುವ ಎಫ್ ಐ ಡಿ ನಂಬರ್ ಇದ್ದರೆ ಮಾತ್ರ ನಿಮ್ಮ data ಸ್ಥಿತಿ ಸರಿಯಾಗಿರುತ್ತದೆ, ನಿಮ್ಮ ಎಫ್ ಐ ಡಿ ತಪ್ಪಿದ್ದಲ್ಲಿ ನಿಮಗೆ ರೆಕಾರ್ಡ್ ನಾಟ್ ಫೌಂಡ್(Record not found) ಎಂದು ಬರುತ್ತದೆ..
ಅಂತಹ ರೈತರಿಗೆ ಬರ ಪರಿಹಾರ ಹಣ ಜಮಯ ಆಗುವುದಿಲ್ಲ ನೀವು ತಪ್ಪದೆ ನಿಮ್ಮ ಹತ್ತಿರದಪರ್ಕ ಕೇಂದ್ರ ಅಥವಾ ತೋಟಗಾರಿಕೆ ಇಲಾಖೆಯನ್ನು ಬೇಟಿಯಾಗಿ ನಿಮ್ಮ ಅಗತ್ಯ ದಾಖಲೆಗಳ ಮೂಲಕ ನಿಮ್ಮ ಫ್ರೂಟ್ಸ್ ಐಡಿ ಯನ್ನು ಜನರೇಟ್ ಮಾಡಿಕೊಳ್ಳಿ ನಂತರ ನಿಮಗೆ ಬರ ಪರಿಹಾರ ಹಣವನ್ನು ಹಾಕಲಾಗುತ್ತದೆ.
➡️ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ತಪ್ಪದೇ ನಿಮಗೆ ಬರ ಪರಿಹಾರ ಹಣ ಜಮೆಯಾಗುತ್ತದೆ??
ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮಗೆ ಹಣ ಬರುತ್ತದೆ ಇಲ್ಲವೋ ಅಥವಾ ನಿಮ್ಮ ಹೆಸರು ಇದರಲ್ಲಿ ಇದೆ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಿ?? 👇🏻
ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service87/
ನಂತರ ಆ ಮುಖಪುಟದಲ್ಲಿ ಕಾಣುವ ಹಾಗೆ ನಿಮ್ಮ ಜಿಲ್ಲೆ, ತಾಲೂಕು,ಹೋಬಳಿ, ನಿಮ್ಮ ಗ್ರಾಮ, ವರ್ಷ, ಸೀಸನ್ (Kharif), ಹಾಗೂ calamity type (drought)ಆಯ್ಕೆ ಮಾಡಿಕೊಂಡು. ನಂತರ Get report ಮೇಲೆ ಕ್ಲಿಕ್ ಮಾಡಿ..
➡️ ನಿಮ್ಮ ಪರಿಹಾರ ಹಣ ಜಮಾ ಆಗಿದ್ದರೆ ಸ್ಟೇಟಸ್ ಅನ್ನು ಹೀಗೆ ಚೆಕ್ ಮಾಡಿಕೊಳ್ಳಿ ಮೊದಲಿಗೆ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ..👇🏻
https://landrecords.karnataka.gov.in/PariharaPayment/
ಈ ಮೇಲಿನ ಲಿಂಕನ್ನು ಕ್ಲಿಕ್ ಮಾಡಿದ ತಕ್ಷಣ ಅಲ್ಲಿ ಕಾಣಿಸುವ ಹಾಗೆ ಮೊದಲು ಆಧಾರ್ ನಂಬರನ್ನು ಆಯ್ಕೆ ಮಾಡಿಕೊಂಡು ನಂತರ ಅಲ್ಲಿ calamity type ಇದ್ದಲಿ (drought) ಎಂದು ಹಾಕಿ ವರ್ಷವನ್ನು ಆಯ್ಕೆ ಮಾಡಿಕೊಂಡು ವಿವರಗಳನ್ನು ಪಡೆಯಲು ವರ್ಷವನ್ನು ಆಯ್ಕೆ ಮಾಡಿ ಅಲ್ಲಿ ಕೊಟ್ಟಿರುವ ಕ್ಯಾಪ್ಚ ಎಂಟ್ರಿ ಮಾಡಿ ನಿಮ್ಮ ಪರಿಹಾರದ ಸ್ಟೇಟಸ್ ಅನ್ನು ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಿ..
ಬರ ಪರಿಹಾರ ಪಡೆಯಲು ರೈತರು ತಮ್ಮ ಜಮೀನಿಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿಯನ್ನು ಪ್ರೋಟ್ಸ್ ತಂತ್ರಾಂಶದಲ್ಲಿ ದಾಖಲಿಸಬೇಕು’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ನಿಮ್ಮ ಆಧಾರ್ ಬ್ಯಾಂಕ್ ಲಿಂಕ್ ಆಗಿರುವ ಸ್ಟೇಟಸ್ ಚೆಕ್ ಮಾಡುವುದು ಹೇಗೆ ಇಲ್ಲಿದೆ ನೋಡಿರಿ 👇🏻
ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್
ನಂತರ ಮುಂದಿನ ಮುಖಪುಟದಲ್ಲಿ ಕಾಣುವ ಹಾಗೆ ಆಧಾರ್ ಸರ್ವಿಸಸ್(Adhaar services) ಅದರ ಮೇಲೆ ಕ್ಲಿಕ್ ಮಾಡಿ.
ನಂತರ ಮುಂದೆ ಕಾಣುವ ಮುಖಪುಟದಲ್ಲಿ ಆಧಾರ್ ಲಿಂಕಿಂಗ್ ಸ್ಟೇಟಸ್ (Adhaar Linking status) ಮೇಲೆ ಕ್ಲಿಕ್ ಮಾಡಿ
ನಂತರ ಅದೇ ಮುಖಪುಟದಲ್ಲಿ ಕೆಲಗೆ ಕಾಣುವ ಹಾಗೆ ಬ್ಯಾಂಕ್ ಸೀಡಿಂಗ್ ಸ್ಟೇಟಸ್ (bank seeding status) ಮೇಲೆ ಕ್ಲಿಕ್ ಮಾಡಿ..
ನಂತರ ಅಲ್ಲಿ ಲಾಗಿನ್ ಕೇಳುತ್ತದೆ ನಿಮ್ಮ ಆಧಾರ್ ಸಂಖ್ಯೆ ಅಲ್ಲಿ ಕೊಟ್ಟಿರುವ ಕ್ಯಾಪ್ಚ ಮತ್ತು ನಿಮ್ಮ ಮೊಬೈಲ್ ಬಗ್ಗೆ ಬಂದಿರುವ ಓಟಿಪಿಯನ್ನು ಹಾಕಿ ಲಾಗಿನ್ ಆಗಿ.
ನಂತರ ಅದೇ ಬ್ಯಾಂಕ್ ಸಿಡಿಂಗ್ ಸ್ಟೇಟಸ್ ಮೇಲೆ ಇನ್ನೊಮ್ಮೆ ಒತ್ತಿ.. ನಂತರ ಅಲ್ಲಿ ನಿಮ್ಮ ಸ್ಟೇಟಸ್ ಆಕ್ಟಿವ್ ಎಂದು ಬಂದರೆ ನಿಮಗೆ ಬರ ಪರಿಹಾರದ ಹಣ ಆಗುತ್ತದೆ..
ಬರ ಪರಿಹಾರದ ಹಣ ಇನ್ನೂ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಇಲ್ಲಿ ಚೆಕ್ ಮಾಡಿಕೊಳ್ಳಿ 👇🏻
ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ
https://play.google.com/store/apps/details?id=com.dbtkarnataka
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಡಿಬಿಟಿ(DBT Karnataka application)ಕರ್ನಾಟಕ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಹಾಗೂ ಇನ್ಸ್ಟಾಲ್(Install) ಮಾಡಿಕೊಳ್ಳಿ.
ನಂತರ ಅಲ್ಲಿ ನಿಮ್ಮ ಆಧಾರ್ ಸಂಖ್ಯೆ ಹಾಕಿ get otp ಮೇಲೆ ಒತ್ತಬೇಕು.
ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿಯನ್ನು(OTP) ಹಾಕಿ ವೆರಿಫೈ (Verify OTP )ಓಟಿಪಿ ಮೇಲೆ ಒತ್ತಬೇಕು.
ನಂತರ ನಿಮಗೆ ಬೇಕಾಗಿರುವ ನಾಲ್ಕು ಅಂಕಿಯmPIN create ಮಾಡಿಕೊಂಡು, ನಂತರ confirm mPIN ಹಾಕಿ,Submit ಬಟನ್ ಮೇಲೆ ಒತ್ತಿರಿ..
ನಂತರ ಅಲ್ಲಿ ಕಾಣಿಸುವ Payment status ಮೇಲೆ ಕ್ಲಿಕ್ ಮಾಡಿ.
ತದನಂತರ ನಿಮಗೆ ಇಲ್ಲಿಯವರೆಗೂ ಸರ್ಕಾರದಿಂದ ಬಂದಿರುವ ಸಹಾಯಧನದ ಮಾಹಿತಿಯು ದೊರೆಯುತ್ತದೆ.
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ ತಪ್ಪದೇ ಈ ಲೇಖನವನ್ನು ಸಂಪೂರ್ಣವಾಗಿ ಓದಿ ಎಲ್ಲರಿಗೂ ಶೇರ್ ಮಾಡಿ 🙏🏻
ಕೃಷಿ ವಾಹಿನಿ ವಾಟ್ಸಪ್ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ 👇🏻
https://chat.whatsapp.com/D6bfj7BBl7lLxTGZOcd2Mh