Pm kisan beneficiary list :- ಕೃಷಿಕರ ಬೇಸಾಯಕ್ಕೆ ಧನಸಹಾಯವಾಗಿ ಸರ್ಕಾರ ಆರಂಭಿಸಿರುವ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ (PM Kisan Samman Nidhi Yojana) ಪ್ರಧಾನಿ ನರೇಂದ್ರ ಮೋದಿ ಅವರು (Khunti, Jharkhand) ಹೊಸ ಕಂತಿನ ಹಣ ಪ್ರಕಟಿಸಿದರು.

ಪಿಎಂ ಕಿಸಾನ್ ಯೋಜನೆಗೆ ಬಜೆಟ್ನಲ್ಲಿ ನೀಡಲಾಗುವ ಹಣದಲ್ಲಿ ಶೇ.30 ರಷ್ಟು ಹೆಚ್ಚಳ ಆಗಬಹುದು ಎನ್ನಲಾಗುತ್ತಿದೆ. ಮಧ್ಯಂತ ಬಜೆಟ್ನಲ್ಲಿ ಈ ಯೋಜನೆಗೆ ಒಂದು ವರ್ಷಕ್ಕೆ 60,000 ಕೋಟಿ ರೂ ಎತ್ತಿ ಇಡಲಾಗಿತ್ತು. ಕೇಂದ್ರ ಬಜೆಟ್ನಲ್ಲಿ ಇರುವ ನಿರೀಕ್ಷೆಗಳಲ್ಲಿ ಪಿಎಂ ಕಿಸಾನ್ ಯೋಜನೆ ಹಣ ಹೆಚ್ಚಳವೂ ಇದೆ..

18 ನೇ ಕಂತಿನ ಅರ್ಹ ರೈತರ ಪಟ್ಟಿ ಮೊಬೈಲ್ ನಲ್ಲಿ ನೋಡುವುದು ಹೇಗೆ??

ಈಗಾಗಲೇ ಪಿ ಎಮ್ ಕಿಸಾನ್ ಪೋರ್ಟಲ್ ನಲ್ಲಿ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ನಿಮ್ಮ ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡಿಕೊಳ್ಳುವುದು ಎಂಬುದನ್ನು ನೋಡಿ 👇🏻

1) ಮೊದಲಿಗೆ 18 ನೇ ಕಂತಿನ beneficiary list ರೈತರ ಪಟ್ಟಿ ತಿಳಿಯಲು ಈ ಕೆಳಗಿನ ಮೇಲೆ ಕ್ಲಿಕ್ ಮಾಡಿಕೊಳ್ಳಿ ಆ ಬಟನ್ ಮೇಲೆ ಕ್ಲಿಕ್ ಮಾಡಬೇಕು

https://pmkisan.gov.in/Rpt_BeneficiaryStatus_pub.aspx

2) ನಂತರ ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ರಾಜ್ಯ ಜಿಲ್ಲೆ ತಾಲೂಕು ಗ್ರಾಮ ಹೆಸರನ್ನು ಆಯ್ಕೆ ಮಾಡಿಕೊಂಡು ಗೆಟ್ ರಿಪೋರ್ಟ್(Get report) ಬಟನ್ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕು. ನಂತರ ನಿಮ್ಮ ಹಳ್ಳಿಯಲ್ಲಿ ಈ ಕಂತಿನ ಹಣ ಯಾವ ಅರ್ಹ ರೈತರಿಗೆ ಬರುತ್ತದೆ ಎಂಬ ಪಟ್ಟಿಯನ್ನು ಅಲ್ಲಿ ನೋಡಬಹುದು.. ಒಂದು ವೇಳೆ ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಹಾಗೆ ಪಿಎಂಕಿಸಾನ್ ಹಣ ಬರುವುದಿಲ್ಲ..

ಪಿಎಂ ಕಿಸಾನ್ ಯೋಜನೆಯಲ್ಲಿ ಒಂದು ವರ್ಷದಲ್ಲಿ 6,000 ರೂ ಹಣವನ್ನು ರೈತರಿಗೆ ನೀಡಲಾಗುತ್ತಿದೆ. ಅಂದರೆ, ತಲಾ 2,000 ರೂಗಳಂತೆ ಮೂರು ಕಂತುಗಳಲ್ಲಿ ಈ ಹಣವನ್ನು ನೀಡಲಾಗುತ್ತಿದೆ. ಈಗ ಒಂದು ಕಂತು ಹೆಚ್ಚು ಮಾಡಬಹುದು. 2,000 ರೂಗಳ ನಾಲ್ಕು ಕಂತುಗಳನ್ನು ರೈತರ ಖಾತೆಗಳಿಗೆ ಹಾಕಬಹುದು. ಒಟ್ಟು ಒಂದು ವರ್ಷದಲ್ಲಿ 8,000 ರೂ ಹಣವು ರೈತರಿಗೆ ಸಿಗಲಿದೆ.

ಎಂಟು ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ 2,000 ರೂ ಹಣ ವರ್ಗಾವಣೆ ಆಗಿದೆ. ಬಹುತೇಕ ಮಂದಿಯ ಖಾತೆಗೆ ಹಣ ಬಂದಿದೆ. ಸರ್ಕಾರ 15ನೇ ಕಂತಿಗೆ ಒಟ್ಟು 18,000 ಕೋಟಿ ರೂ ಹಣ ವೆಚ್ಚ ಮಾಡಿದೆ. ಇಲ್ಲಿಯವರೆಗೆ ಎಲ್ಲಾ 15 ಕಂತುಗಳಿಂದ ಒಟ್ಟು ಹಣ 2.75 ಲಕ್ಷ ಕೋಟಿ ರೂ ಆಗಿದೆ.

➡️ ಹಣ ಈಗಾಗಲೇ ಬಿಡುಗಡೆ ಆಗಿದೆ ನಿಮ್ಮ ಖಾತೆಗೆ ಬಂದಿರುವ ಹಣ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ

ಮೊದಲಿಗೆ ಈ ಕೆಳಕಂಡ ಲಿಂಕನ್ನು ಒತ್ತಿರಿ 👇🏻

https://play.google.com/store/apps/details?id=com.dbtkarnataka

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಡಿಬಿಟಿ(DBT Karnataka application)ಕರ್ನಾಟಕ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಹಾಗೂ ಇನ್ಸ್ಟಾಲ್(Install) ಮಾಡಿಕೊಳ್ಳಿ.

ನಂತರ ಅಲ್ಲಿ ನಿಮ್ಮ ಆಧಾರ್ ಸಂಖ್ಯೆ ಹಾಕಿ get otp ಮೇಲೆ ಒತ್ತಬೇಕು.

ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿಯನ್ನು(OTP) ಹಾಕಿ ವೆರಿಫೈ (Verify OTP )ಓಟಿಪಿ ಮೇಲೆ ಒತ್ತಬೇಕು.

ನಂತರ ನಿಮಗೆ ಬೇಕಾಗಿರುವ ನಾಲ್ಕು ಅಂಕಿಯmPIN create ಮಾಡಿಕೊಂಡು, ನಂತರ confirm mPIN ಹಾಕಿ,Submit ಬಟನ್ ಮೇಲೆ ಒತ್ತಿರಿ..

ನಂತರ ಅಲ್ಲಿ ಕಾಣಿಸುವ Payment status ಮೇಲೆ ಕ್ಲಿಕ್ ಮಾಡಿ.

ತದನಂತರ ನಿಮಗೆ ಇಲ್ಲಿಯವರೆಗೂ ಸರ್ಕಾರದಿಂದ ಬಂದಿರುವ ಸಹಾಯಧನದ ಮಾಹಿತಿಯು ದೊರೆಯುತ್ತದೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಅಡಿಯಲ್ಲಿ ಜಮೆ ಆಗಿರುವ ಹಣದ ಸ್ಟೇಟಸ್ ಅನ್ನು ಈ ಕೆಳಕಂಡಂತೆ ನೀವು ನಿಮಗೆ ಎಷ್ಟು ಹಣ ಜಮೆಯಾಗಿದೆ ಎಂಬುದನ್ನು ನೋಡಬಹುದು..

ಅದೇ ರೀತಿಯಾಗಿ ರೈತಶಕ್ತಿ ಯೋಜನೆಯ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಡೀಸೆಲ್ ಸಬ್ಸಿಡಿ ಯೋಜನೆಯ ಅಡಿ ಎಷ್ಟು ಹಣ ಜಮೆಯಾಗಿದೆ ಎಂಬ ಸ್ಟೇಟಸ್ ಅನ್ನು ನೋಡಬಹುದು.

ಮುಂದಿನ ಹಂತದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ನಿಮಗೆ ಎಷ್ಟು ಹಣ ಜಮೆಯಾಗಿದೆ ಎಂಬ ಸ್ಟೇಟಸ್ ಅನ್ನು ಅಲ್ಲಿ ನೋಡಬಹುದು..

ನಾವು ಈ ಮೇಲೆ ಕಾಣಿಸಿದ ಎಲ್ಲ ಮಾಹಿತಿಯು ಸರಿಯಾಗಿದ್ದು ಸರ್ಕಾರದ ಅಡಿ ಬರುವ ಎಲ್ಲಾ ಯೋಜನೆಗಳ ಹಣ ನಿಮ್ಮ ಖಾತೆಗೆ ಬಂದಿರುವುದನ್ನು ಸರಳವಾಗಿ ನೀವು ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಬಹುದು.

ಪಿಎಂ ಕಿಸಾನ್ ಸ್ಕೀಮ್ನಲ್ಲಿ ಹಣ ಬಂದಿಲ್ಲದಿದ್ದರೆ ಅದಕ್ಕೆ ಕಾರಣಗಳಿವು…

• ಯೋಜನೆಗೆ ಇನ್ನೂ ನೋಂದಣಿ ಆಗಿಲ್ಲದೇ ಇರಬಹುದು.

ಇಕೆವೈಸಿ ಆಗಿಲ್ಲದೇ ಇರಬಹುದು, ಅಥವಾ ಸರಿಯಾಗಿ ಮಾಡಿಲ್ಲದೇ ಇರಬಹುದು.

ಯೋಜನೆಯ ಅರ್ಹತಾ ಮಾನದಂಡ ಒದಗಿಸಲು ವಿಫಲವಾಗಿರಬಹುದು

ನೀವು ಪಿಎಂ ಕಿಸಾನ್ ಸ್ಕೀಮ್ನ ಅಧಿಕೃತ ಪೋರ್ಟಲ್ಗೆ (ಲಿಂಕ್ ಇಲ್ಲಿದೆ:- https://pmkisan.gov.in/) ಹೋದರೆ ಮುಖ್ಯಪುಟದಲ್ಲೇ ಆರಂಭದಲ್ಲಿ ಒಂದು ಪಾಪ್ ಅಪ್ ಬರುತ್ತದೆ. ಅದರಲ್ಲಿ ಇಕೆವೈಸಿ, ನಿಮ್ಮ ಸ್ಟೇಟಸ್ ತಿಳಿಯಲು ಹಾಗೂ ಪಿಎಂ ಕಿಸಾನ್ ಮೊಬೈಲ್ ಆಯಪ್ ಡೌನ್ಲೋಡ್ ಮಾಡಲು ಕ್ಯುಆರ್ ಕೋಡ್ಗಳು ಕಾಣುತ್ತವೆ. ನಿಮಗೆ ಬೇಕಾದರೆ ಅದನ್ನು ಸ್ಕ್ಯಾನ್ ಮಾಡಿ ಮಾಹಿತಿ ಪಡೆಯಬಹುದು.. ಇಲ್ಲವಾದಲ್ಲಿ ತಪ್ಪದೆ ಹತ್ತಿರದ ರೈತ ಸಂಪರ್ಕ ಕೇಂದ್ರ, ಗ್ರಾಮ ಒನ್ ಕೇಂದ್ರಕ್ಕೆ ಭೇಟಿ ನೀಡಿರಿ..

ನಾವು ದಿನನಿತ್ಯ ರೈತರಿಗೆ ಉಪಯೋಗವಾಗುವಂತಹ ಮಾಹಿತಿಯನ್ನು ನೀಡುತ್ತೇವೆ ಮತ್ತು ನಾವು ನೀಡುತ್ತಿರುವ ಮಾಹಿತಿ ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಸ್ನೇಹಿತರಿಗೂ ಶೇರ್ ಮಾಡಿ🙏🏻

ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/D6bfj7BBl7lLxTGZOcd2Mh

ಪಿಎಂ ಕಿಸಾನ್ ಹಣ ಜಮೆಯಾಗಿರುವ ಸ್ಟೇಟಸ್ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

Leave a Reply

Your email address will not be published. Required fields are marked *