The weather department has predicted heavy rain :- ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆದು ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಇನ್ನೂ ಕೆಲವೆಡೆ ಸಾಧಾರಣ ಮಳೆಯಾಗುತ್ತಿದೆ. ಹಾಗೇಯೆ ಈ ಭಾಗಗಳಲ್ಲಿ ಇಂದಿನಿಂದ ಎರಡು ದಿನಗಳ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದರೆ, ಚಾಮರಾಜನಗರ, ಮಂಡ್ಯ, ಮೈಸೂರು, ದಾವಣಗೆರೆ, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೀದರ್ ಸೇರಿದಂತೆ ಕೆಲವೆಡೆ ಸಾಧಾರಣ ಮಳೆಯಾಗುತ್ತಿದೆ.
ಹಾಗೆಯೇ ರಾಜ್ಯದ ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಜುಲೈ 27ರ ವರೆಗೂ ಮಳೆ ಮತ್ತಷ್ಟು ಚುರುಕು ಪಡೆಯಲಿದೆ. ಇನ್ನು ಇಂದು (ಜುಲೈ 26) ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನಯ ಕಲುಬರಗಿ, ವಿಜಯಪುರ, ಯಾದಗಿರಿ, ಬೀದರ್, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆ ಪ್ರಕಾರ, ಜುಲೈ 27ರ ವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯುದೆ. ಆದ್ದರಿಂದ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಈ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದೆ.
ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಹಾಗೆಯೇ ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ವಿಜಯನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ತುಮಕೂರು,ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆ ಬೀಳಲಿದೆ ಎಂದು ತಿಳಿಸಿದೆ.
ಇನ್ನು ರಾಜ್ಯ ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲೂ ಜುಲೈ 23ರಿಂದ ಜುಲೈ 27ರ ವರೆಗೆ ಸಾಧಾರಣ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ. ಜುಲೈ ಎಲ್ಲಿಲ್ಲಿ ಎಷ್ಟು ಮಳೆ?
1.ಮಂಗಳೂರು – 30.8 ಮಿ.ಮೀಟರ್
2. ಕಾರವಾರ – 15 ಮಿ.ಮೀಟರ್
3. ಶಿರಾಲಿ – 32.6 ಮಿ.ಮೀಟರ್
4. ಹೊನ್ನಾವರ – 107.0 ಮಿ.ಮೀಟರ್
5. ಪಣಂಬೂರು – 21.0 ಮಿ.ಮೀಟರ್
6. ಆಗುಂಬೆ – 99.5 ಮಿ.ಮೀಟರ್
7. ಮೂಡಿಗೆರೆ – 51.0 ಮಿ.ಮೀಟರ್
8. ಬೆಳಗಾವಿ – 13.0 ಮಿ.ಮೀಟರ್
9. ಬೆಂಗಳೂರು – 5.4 ಮಿ.ಮೀಟರ್
10. ಬೆಂಗಳೂರು ಗ್ರಾಮಾಂತರ- 5.5 ಮಿ.ಮೀಟರ್
11. ಹಾಸನ – 9.0 ಮಿ.ಮೀಟರ್
12. ಗದಗ – 3.5 ಮಿ.ಮೀಟರ್
13. ಚಿತ್ರದುರ್ಗ – 2.4 ಮಿ.ಮೀಟರ್
14. ಹಾವೇರಿ – 42.ಮಿ.ಮೀಟರ್
15. ದೊಡ್ಡಬಳ್ಳಾಪುರ – 1.5 ಮಿ.ಮೀ ಇನ್ನು ಇಂದು (ಜುಲೈ 23) ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ..
ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ👇🏻
https://chat.whatsapp.com/D6bfj7BBl7lLxTGZOcd2Mh