40 crore crop insurance money sanctioned :- ನಮಸ್ಕಾರ ಆತ್ಮೀಯ ರೈತ ಬಾಂಧವರೇ, ಇಂದಿನ ಲೇಖನದಲ್ಲಿ ಬಾಕಿ ಉಳಿದಿರುವ ಬೆಳೆ ವಿಮೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಿರಿ..!
ನಿಮ್ಮ ಖಾತೆಗೆ ಬಾಕಿ ಇರುವ 40 ಕೋಟಿ ಬೆಳೆ ವಿಮೆ ಹಣ ಮಂಜೂರು! ನಿಮ್ಮ ಖಾತೆಗೆ ಎಷ್ಟು ಹಣ ಬರುತ್ತದೆ? ಯಾವಾಗ ಬರುತ್ತದೆ? ತಪ್ಪದೆ ಈ ಲೇಖನ ವನ್ನು ಸಂಪೂರ್ಣ ವಾಗಿ ಓದಿ ಬಾಕಿ ಇರುವ ಬೆಳೆ ವಿಮೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಿರಿ.
ಆನ್ಲೈನ್ ಮೂಲಕ ಹಣ ಜಮೆ ಆಗಿರುವುದನ್ನು ಸ್ಟೇಟಸ್ ಚೆಕ್ ಮಾಡುವುದು ಹೇಗೆ ಈ ಕೆಳಗಿಂನಂತೆ ನೋಡಿರಿ 👇🏻
ಡೈರೆಕ್ಟಾಗಿ ಲಿಂಕ್ ಗಾಗಿ ಕೆಳಗಡೆ ಕ್ಲಿಕ್ ಮಾಡಿ
https://samrakshane.karnataka.gov.in/Premium/CheckStatusMain_aadhaar.aspx
ಹಾಗಾಗಿ ನಿಮ್ಮ ಖಾತೆಗಳಿಗೂ ಜಮೆ ಆಗಿರಬಹುದು ಆದ ಕಾರಣ ಮೇಲೆ ತಿಳಿಸಿದಂತಹ ಸ್ಟೆಪ್ಸ್ ಗಳನ್ನು ಅನುಸರಿಸಿ ನಿಮಗೂ ಜಮೆಯಾಗಿದೆಯೋ ಇಲ್ಲವೋ ಚೆಕ್ ಮಾಡಿಕೊಳ್ಳಿ.
ಡಿಸಿ ಕಚೇರಿಗೆ ರೈತರ ಮುತ್ತಿಗೆ:-
ಹಾವೇರಿ: ಕುಲಾಂತರಿ ತಳಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣವಾಗಿ ತಿರಸ್ಕರಿಸಬೇಕು, ರೈತರ ಬಾಕಿ 67 ಕೋಟಿ ರೂ. ಬೆಳೆ ವಿಮೆ ಬಾಕಿ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಗುರುವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು. ರೈತ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳಿರ ಮಾತನಾಡಿ, ಬರಗಾಲ, ಅತಿವೃಷ್ಟಿಯಿಂದ ಬೆಳೆ ನಷ್ಟ ಅನುಭವಿಸುತ್ತಿದ್ದು ಬೆಳೆ ಪರಿಹಾರ ಕೊಡುವಲ್ಲಿ ಸರ್ಕಾರ ವಿಫಲವಾಗಿವೆ.
ಇದನ್ನು ಓದಿರಿ :- 🌱💚ಸರ್ಕಾರದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ👇🏻
👇🏻ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ ✨https://krushivahini.com/2024/09/29/loan-facility-under-various-schemes/
2023-24ನೇ ಸಾಲಿನ ಬೆಳೆ ವಿಮೆಯಲ್ಲಿ ಜಿಲ್ಲೆಯ ರೈತರಿಗೆ ಅನ್ಯಾಯವಾಗಿದ್ದು, ಸರಿಪಡಿಸಬೇಕು. ಹೆಸ್ಕಾಂ ಕಂಪನಿ ಬೋರ್‌ವೆಲ್ ಹಾಕಿಸಿದ ರೈತರಿಂದ ಮೊದಲಿನ ರೀತಿ ಅರ್ಜಿ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿದರು. ರೈತ ಮುಖಂಡರಾದ ಶಿವಬಸಪ್ಪ ಗೋವಿ, ಎಚ್.ಎಚ್. ಮುಲ್ಲಾ, ಶಿವಯೋಗಿ ಹೊಸಗೌಡ್ರ, ಮಲ್ಲನಗೌಡ್ರ ಮಾಳಗಿ, ಯಶವಂತ ಎಡಗೋಡಿ ಸೇರಿದಂತೆ ನೂರಾರು ರೈತರು ಪಾಲ್ಗೊಂಡಿದ್ದರು.
ನಿಮ್ಮ ಜಿಲ್ಲೆಯ ಇನ್ಸೂರೆನ್ಸ್(insurance) ಕಂಪನಿ ಯಾವುದು ಎಂದು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ? ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಯಾವ ಜಿಲ್ಲೆಗೆ ಯಾವ ಇನ್ಶೂರೆನ್ಸ್ ಕಂಪನಿ ಇರುವ ಬಗ್ಗೆ ಮಾಹಿತಿಯನ್ನು ನೀವು ತಿಳಿದುಕೊಳ್ಳುತ್ತೀರಿ.👇🏻
https://samrakshane.karnataka.gov.in/HomePages/frmKnowYourInsCompany.aspx
40 ಕೋಟಿ ರೂಪಾಯಿ ಮಂಜೂರು
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಂಸದ ಬಸವರಾಜ ಬೊಮ್ಮಾಯಿ ರೈತರ ಅಹವಾಲು ಆಲಿಸಿ, 2023-24ನೇ ಸಾಲಿನ ಬಾಕಿ ಉಳಿದಿರುವ 67 ಕೋಟಿ ಬೆಳೆ
ವಿಮೆ ಪರಿಹಾರ ಹಣದಲ್ಲಿ 40 ಕೋಟಿ ರೂ. ಮಂಜೂರಾಗಿದೆ.
ಶೀಘ್ರದಲ್ಲಿಯೇ ಹಣ ಬಿಡುಗಡೆಯಾಗಲಿದೆ. ಇನ್ನುಳಿದ ಬಾಕಿ ಪರಿಹಾರ ಹಣ ಕೊಡಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಹಾವೇರಿಯ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಸದಸ್ಯರು ಪ್ರತಿಭಟನೆ ನಡೆಸಿದರು.
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ ತಪ್ಪದೇ ಈ ಲೇಖನವನ್ನು ಸಂಪೂರ್ಣವಾಗಿ ಓದಿ ಎಲ್ಲರಿಗೂ ಶೇರ್ ಮಾಡಿ 🙏🏻
ಕೃಷಿ ವಾಹಿನಿ ವಾಟ್ಸಪ್ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ 👇🏻
https://chat.whatsapp.com/D6bfj7BBl7lLxTGZOcd2Mh