Aadhaar seeding is mandatory for Pahani :- ಪಹಣಿಗೆ ಆಧಾರ್ ಸೀಡಿಂಗ್ ಕಡ್ಡಾಯ:-
ಸರ್ಕಾರದ ಸೌಲಭ್ಯಗಳನ್ನು ಸಮಯಕ್ಕೆ ಸರಿಯಾಗಿ ಪಡೆಯಲು, ರೈತರು ತಮ್ಮ ಪಹಣಿಗಳನ್ನು ಆಧಾರ್ ಜೊತೆಗೆ ಜೋಡಿಸಬೇಕು ಎಂದು ಕರ್ನಾಟಕ ಸರ್ಕಾರ ತಿಳಿಸಿದೆ.
ಪಹಣಿಗೆ ಆಧಾರ್ ಲಿಂಕ್ ಹೇಗೆ ಮಾಡಬಹುದು?👇🏻💚
ರೈತರು ತಮ್ಮ ಜಮೀನಿನ ಪಹಣಿ ಮತ್ತು ಆಧಾರ್ ದಾಖಲಾತಿಗಳೊಂದಿಗೆ.
ನಂತರ, ಪಹಣಿಯನ್ನು ಆಧಾರ್ ಜೊತೆಗೆ ಲಿಂಕ್ ಮಾಡಬಹುದು.
ಗ್ರಾಮ ಅಧಿಕಾರಿಗಳ ಮೂಲಕ:- ರೈತರು ತಮ್ಮ ಪಹಣಿ ಮತ್ತು ಆಧಾರ್ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಗ್ರಾಮ ಅಧಿಕಾರಿಗಳನ್ನು ಸಂಪರ್ಕಿಸಬಹುದು.
ಅಧಿಕಾರಿಗಳು ಪಹಣಿಯನ್ನು ಆಧಾರ್ ಜೊತೆಗೆ ಜೋಡಿಸಲು ಸಹಾಯ ಮಾಡುತ್ತಾರೆ.
ಇದನ್ನು ಓದಿರಿ :- ಈ ಪಟ್ಟಿಯಲ್ಲಿ ಇರುವ ರೈತರಿಗೆ ಇನ್ನೂ ಆದರೂ ಬೆಳೆ ಹಾನಿ ಪರಿಹಾರ ಜಮೆಯಾಗಿಲ್ಲ 👇🏻💚 https://krushivahini.com/2024/10/21/these-farmers-have-not-received-crop-damage-compensation-money/
ನಿಮ್ಮ ಹೊಲದ ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮೊಬೈಲ್ ನಲ್ಲಿ ಮಾಡುವುದು ಹೇಗೆ? ಇಲ್ಲಿ ನೋಡಿ 👇🏻
ಮೊದಲನೆಯದಾಗಿ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಳ್ಳಿ 👇🏻
https://landrecords.karnataka.gov.in/service4
ನಂತರ ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಮತ್ತು Captcha Code ಎಂಟ್ರಿ ಮಾಡಿ.
ನಂತರ ಅಲ್ಲೇ ಕೆಳಗೆ ಕಾಣುವ Send OTP ಮೇಲೆ ಕ್ಲಿಕ್ ಮಾಡಿ.
ನಿಮ್ಮ ಮೊಬೈಲ್ ಸಂಖ್ಯೆಗೆ ಬಂದ OTP ಯನ್ನು ಅಲ್ಲಿ ನಮೂದಿಸಿ.
ನಿಮ್ಮ ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ನಲ್ಲಿರುವಂತೆ ನಿಮ್ಮ ಹೆಸರನ್ನು ನಮೂದಿಸಿ.
ನಾನು ಇಲ್ಲಿ ಸ್ವಯಂ ಪ್ರೇರಣೆಯಿಂದ ಆಧಾರ ಗಾಗಿ ನನ್ನ ಒಪ್ಪಿಗೆಯನ್ನು ನೀಡುತ್ತೇನೆ” ಎಂಬ ಚೌಕದ ಮೇಲೆ ಕ್ಲಿಕ್ ಮಾಡಿ. “Verify” ಮೇಲೆ ಕ್ಲಿಕ್ ಮಾಡಿ.
“ಆಧಾರವನ್ನು ಯಶಸ್ವಿಯಾಗಿ ಪರಿಶೀಲಿಸಲಾಗಿದೆ” ಎಂಬ ಸಂದೇಶ ಕಾಣಿಸುತ್ತದೆ. “FETCH Details” ಮೇಲೆ ಕ್ಲಿಕ್ ಮಾಡಿ.
ಇಷ್ಟು ಮಾಡಿದರೆ ನಿಮ್ಮ ಆರ್.ಟಿ.ಸಿ ಗೆ ಆಧಾರ್ ಲಿಂಕ್ ಆಗಿದೆ ಎಂದು ಖಚಿತ. ಈ ಪ್ರಕ್ರಿಯೆ ಉಚಿತ, ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ. ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು ಮತ್ತು ಪಹಣಿ ಯಲ್ಲಿರುವ ಹೆಸರು ಒಂದೇ ಆಗಿರಬೇಕು.
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ ಈ ಲೇಖನವನ್ನು ತಪ್ಪದೆ ಓದಿ ಎಲ್ಲರಿಗೂ ಶೇರ್ ಮಾಡಿ 🙏🏻🙏🏻
ಕೃಷಿ ವಾಹಿನಿ ವಾಟ್ಸಪ್ ಗ್ರೂಪ್ ಸೇರಲು ಈ ಕೆಳಕಂಡ ಲಿಂಕ್ ಅನ್ನು ತಪ್ಪದೇ ಒತ್ತಿ 👇🏻🙏🏻https://chat.whatsapp.com/D6bfj7BBl7lLxTGZOcd2Mh
ಇದನ್ನು ಓದಿರಿ :-🌱ತೋಟಗಾರಿಕೆ ರೈತರಿಗೆ 25,000 ಸಹಾಯದನಕ್ಕೆ ಅರ್ಜಿ ಅಹ್ವಾನ!”💚
👉🏻ಅರ್ಹತೆಗಳು,ಅರ್ಜಿ ಎಲ್ಲಿ ಸಲ್ಲಿಸಬೇಕು?? https://krushivahini.com/2024/10/22/rkvy-subsidy-scheme/