Rain alert for 13 districts :- ನಮಸ್ಕಾರ ಆತ್ಮೀಯ ರೈತ ಬಾಂಧವರೇ, ಇಂದಿನ ಲೇಖನದಲ್ಲಿ ಮಳೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಪ್ಪದೆ ತಿಳಿದುಕೊಳ್ಳಿ..

ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಸೋಮವಾರ ಬೆಳಗಿನ ಜಾವ ಭಾರೀ ಮಳೆಯಾಗಿದೆ. ಮುಂಗಾರು ಆರಂಭದಲ್ಲಿ ಮಳೆ ಸುರಿದ ಹಾಗೆ ಗುಡುಗು ಸಹಿತ, ದಟ್ಟ ಮೋಡ ಕವಿದು ಮಳೆ ಸುರಿದಿದೆ. ಮಳೆಯಿಂದಾಗಿ ರೈತರಲ್ಲಿ ಆತಂಕ ಹೆಚ್ಚಿದೆ. ಬೆಳೆದು ನಿಂತ ಬೆಳೆಗಳಿಗೆ ಹಾನಿಯಾಗುವ ಆತಂಕ ಮೂಡಿದೆ.

Rain alert for these districts :- ಬೆಳಗಾವಿ ಸೇರಿದಂತೆ ರಾಜ್ಯದ 13 ಜಿಲ್ಲೆಗಳಿಗೆ ಸೋಮವಾರ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಉತ್ತರಕನ್ನಡ, ಉಡುಪಿ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಂಗಳವಾರ ಕೂಡ ರಾಜ್ಯದ 8 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಅ.26ರ ವರೆಗೂ ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿಯಲ್ಲಿ ಗಂಟೆಗೆ 35ರಿಂದ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಎಚ್ಚರಿಕೆಯಿಂದಿರುವಂತೆ ಮೀನುಗಾರರಿಗೆ ತಿಳಿಸಲಾಗಿದೆ.

ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ ತಪ್ಪದೇ ಈ ಲೇಖನವನ್ನು ಸಂಪೂರ್ಣವಾಗಿ ಓದಿ ಎಲ್ಲರಿಗೂ ಶೇರ್ ಮಾಡಿ 🙏🏻

ಕೃಷಿ ವಾಹಿನಿ ವಾಟ್ಸಪ್ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ 👇🏻

https://chat.whatsapp.com/D6bfj7BBl7lLxTGZOcd2Mh

Leave a Reply

Your email address will not be published. Required fields are marked *