RKVY Subsidy scheme :- ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ತೋಟಗಾರಿಕೆ ರೈತರಿಗೆ 25 ಸಾವಿರ ಸಹಾಯಧನಕ್ಕೆ ಅರ್ಜಿ ಆಹ್ವಾನ!

ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?? ಎಷ್ಟು ಸಹಾಯಧನ ಸಿಗಲಿದೆ?? ತಪ್ಪದೇ ಈ ಲೇಖನದಲ್ಲಿ ಓದಿ ತಿಳಿದುಕೊಳ್ಳಿ.

ದಾವಣಗೆರೆ: ಪ್ರಸಕ್ತ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ 25 ಸಾವಿರ ಸಹಾಯಧನಕ್ಕೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ನೀರಿನಲ್ಲಿ ಕರಗುವ ರಸಗೊಬ್ಬರ ಘಟಕದ ಪ್ರತಿ ಹೆಕ್ಟೇರ್‍ಗೆ ವೆಚ್ಚ ರೂ.50,000 ಇದ್ದು. ಸಾಮಾನ್ಯ ವರ್ಗದ ರೈತರಿಗೆ ಶೇ.40 ರಂತೆ ರೂ.20,000 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ.50ರಂತೆ ರೂ.25,000 ಸಹಾಯಧನವನ್ನು ನೀಡಲಾಗುವುದು.

ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರು ಅನುಮೋದಿತ ಕಂಪನಿಯಿಂದ ರಸಗೊಬ್ಬರ ಖರೀದಿಸಿದ ಮೊತ್ತದ ಬಿಲ್ಲುಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಜಗಳೂರು ಇಲ್ಲಿಗೆ ಅ.30 ರೊಳಗೆ ಸಲ್ಲಿಸಿದ್ದಲ್ಲಿ ನೇರವಾಗಿ ರೈತರ ಖಾತೆಗೆ ಜಮಾ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಪ್ರಸನ್ನ ಕುಮಾರ್.ಜಿ.ಹೆಚ್ ರೈ.ಸಂ.ಕೇಂದ್ರ ಕಸಬಾ ಮತ್ತು ಬಿಳಿಚೋಡು ಮೊ.ಸಂ. 9108338179, ಸುನೀಲ್ ಕುಮಾರ್. ಹೆಚ್.ಟಿ ರೈ.ಸಂ. ಕೇಂದ್ರ ಸೂಕ್ತ ಮೊ.ಸಂ. 7899942287 ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಜಗಳೂರು ಇಲ್ಲಿ ಸಂಪರ್ಕಿಸಲು ತಿಳಿಸಲಾಗಿದೆ..

ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ ತಪ್ಪದೇ ಈ ಲೇಖನವನ್ನು ಸಂಪೂರ್ಣವಾಗಿ ಓದಿ ಎಲ್ಲರಿಗೂ ಶೇರ್ ಮಾಡಿ 🙏🏻

ಕೃಷಿ ವಾಹಿನಿ ವಾಟ್ಸಪ್ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ 👇🏻

https://chat.whatsapp.com/D6bfj7BBl7lLxTGZOcd2Mh

Leave a Reply

Your email address will not be published. Required fields are marked *