Bus fare hike :- ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಳೆದ ಗುರುವಾರ ನಡೆದ ಸಚಿವ ಸಂಪುಟದ ತೀರ್ಮಾನದಂತೆ ಯಾನದರ ಪರಿಷ್ಕರಣೆಗೊಳಿಸಿದ ಅಧಿಕೃತ ಆದೇಶ ಶನಿವಾರ ಹೊರಬಿದ್ದಿದೆ. ಟಿಕೆಟ್ ಮೂಲ ಪ್ರಯಾಣ ದರದಲ್ಲಿ 7 ರೂ.ಗಳಿಂದ 115 ರೂ. ವರೆಗೂ ಹೆಚ್ಚಳವಾಗಿದೆ. ಸಿಬಂದಿ ವೇತನ, ಇಂಧನ ಮತ್ತು ನಿರ್ವಹಣೆ ವೆಚ್ಚದ ಹೆಚ್ಚಳವನ್ನು ಪರಿಗಣಿಸಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಸರಕಾರ ಆದೇಶದಲ್ಲಿ ಸ್ಪಷ್ಟಪಡಿಸಿದೆ..
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) 2015ರಲ್ಲಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್ಡಬ್ಲ್ಯುಕೆಆರ್ಟಿಸಿ) ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ (ಕೆಎಸ್ಆರ್ಟಿಸಿ)ಗಳಲ್ಲಿ 2020ರಲ್ಲಿ ಪ್ರಯಾಣದ ದರ ಪರಿಷ್ಕರಣೆ ಮಾಡಲಾಗಿತ್ತು..
ಇದನ್ನು ಓದಿರಿ :- ಕೃಷಿ ಹಾಗೂ ತೋಟಗಾರಿಕೆ ಇಲಾಖೆಯಿಂದ ಜಂಟಿ ಸಮೀಕ್ಷೆ! ಬೆಳೆ ಹಾನಿ ಪರಿಹಾರ ಹಣ ಜಮಾಗಲಿದೆ https://krushivahini.com/2025/01/05/compensation-for-crop-loss/
ಪ್ರತಿಷ್ಠಿತ ಬಸ್‌ಗಳಿಗೆ ದರ ಏರಿಕೆ ಅನ್ವಯಿಸುವುದಿಲ್ಲ..
ಜಿಎಸ್‌ಟಿ (ಸರಕು ಸೇವಾ ತೆರಿಗೆ) ಹವಾನಿಯಂತ್ರಿತ (ಎಸಿ) ಬಸ್‌ಗಳಿಗೆ ಮಾತ್ರ ಅನ್ವಯಿಸುತ್ತದೆ. ಜತೆಗೆ ಪ್ರತಿಷ್ಠಿತ ಬಸ್‌ಗಳ ಪ್ರಯಾಣ ದರ ಏರಿಕೆಯು ನಿಗಮದ ಮಟ್ಟದಲ್ಲೇ ಕಾಲ ಕಾಲಕ್ಕೆ ನಡೆಯುವ ಪ್ರಕ್ರಿಯೆ ಆಗಿರುತ್ತದೆ. ಆ ಹಿನ್ನೆಲೆಯಲ್ಲಿ ಈಗ ಏರಿಕೆ ಮಾಡಲಾಗಿರುವ ಟಿಕೆಟ್ ದರವು ಅವುಗಳಿಗೆ ಅನ್ವಯಿಸುವುದಿಲ್ಲ ಎಂದು ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳಲ್ಲಿರುವ ಸರಕಾರಿ ಬಸ್‌ಗಳ ಟಿಕೆಟ್ ದರವನ್ನು ಹೋಲಿಸಿದಲ್ಲಿ ಕರ್ನಾಟಕದಲ್ಲಿ ಸಾರಿಗೆ ಬಸ್‌ದ ಕಡಿಮೆಯಿದೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ..
ಪ್ರಯಾಣ ದರ ಏರಿಕೆ: ಎಲ್ಲಿಗೆ ಎಷ್ಟು?
ಬೆಂಗಳೂರಿನಿಂದ ವಿವಿಧ ಜಿಲ್ಲಾ ಕೇಂದ್ರದ ಘಟಕಗಳಿಗೆ ತೆರಳುವ ಕೆಎಸ್ಆರ್ಟಿಸಿ ವೇಗದೂತ ಬಸ್ ಪ್ರಯಾಣದ ದರ ಪಟ್ಟಿ ಈ ಕೆಳಕಂಡಂತಿದೆ
ಹಳೆಯ ದರ / ಹೊಸ ದರ ಪಟ್ಟಿ
ಬಳ್ಳಾರಿ 374 424
ಹೊಸಪೇಟೆ 402 455
ಕೊಪ್ಪಳ 447 506
ವಿಜಯಪುರ 677 779
ಬೆಳಗಾವಿ 617 697
ಚಿಕ್ಕೋಡಿ 708 801
ಬಾಗಲಕೋಟೆ 605 685
ಧಾರವಾಡ 523 591
ಹುಬ್ಬಳ್ಳಿ 459 563
ಶಿರಸಿ 458 520
ಗದಗ 525 593
ಹಾವೇರಿ 420 – 474
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ ತಪ್ಪದೇ ಈ ಲೇಖನವನ್ನು ಸಂಪೂರ್ಣವಾಗಿ ಓದಿ ಎಲ್ಲರಿಗೂ ಶೇರ್ ಮಾಡಿ
ಕೃಷಿ ವಾಹಿನಿ ವಾಟ್ಸಪ್ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ
https://chat.whatsapp.com/D6bfj7BBl7lLxTGZOcd2Mh