1.2 lakh compensation for flood affected areas :- ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದ ಜೊತೆಗೆ ಮನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿಯು ಪರಿಹಾರ ವಿತರಣೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಹಿಂದೆ ಬಿ.ಎಸ್.ಯಡಿಯೂರಪ್ಪನವರು ಸಂಪೂರ್ಣ ಮನೆ ಹಾನಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಈ ನೆರವಿನ ದುರುಪಯೋಗವಾಯಿತು.

ಇದನ್ನು ಓದಿರಿ :- 🌱ಆಧಾರ್ ಲಿಂಕ್ ಆಗಿರುವ ರೈತರ ಪಟ್ಟಿ ಬಿಡುಗಡೆ! ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ 👇🏻 https://krushivahini.com/2024/08/07/how-to-check-adhaar-linked-farmers-list/

ಹಾಗೂ ಹಲವರಿಗೆ ಮೊದಲನೇ ಕಂತು ಮಾತ್ರ ಬಿಡುಗಡೆಯಾಗಿ, ಎರಡು ಹಾಗೂ ಮೂರನೇ ಕಂತಿನ ಪರಿಹಾರ ಈ ವರೆಗೂ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ 1.2 ಲಕ್ಷ ರೂ. ಪರಿಹಾರ ಹಾಗೂ ಮನೆ ನೀಡುವ ನಿರ್ಧಾರ ಮಾಡಿದೆ ಎಂದು ಸ್ಪಷ್ಟ ಪಡಿಸಿದರು..

ಜನರ ಸಹಕಾರ ವಿದ್ದರೆ ಪದೇ ಪದೇ ಮುಳುಗಡೆಯಾಗುವ ಹಳ್ಳಿಗಳ ಸ್ಥಳಾಂತರ ಮಾಡುವ ಮೂಲಕ ಶಾಶ್ವತ ಪರಿಹಾರ ಒದಗಿಸಲು ಚಿಂತನೆ ಮಾಡಲಾಗುವುದು ಎಂದು ತಿಳಿಸಿದರು.

ಪರಿಹಾರ ಕೆಲಸ ಪ್ರಾರಂಭ:-

ರಾಜ್ಯದ ಹಲವೆಡೆ ಮಳೆಯಿಂದ ಹಾನಿಯಾಗಿದೆ. ಎಲ್ಲ ಕಡೆ ಪರಿಹಾರ ಕೆಲಸಗಳನ್ನು ಪ್ರಾರಂಭಿಸಲಾಗಿದೆ ಎಂದರು. ಬೆಳಗಾವಿಯಲ್ಲಿ ಕಳೆದ 42 ದಿನದಿಂದ ನಿರಂತರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿಗಳಿಗೂ ರಜೆ ಘೋಷಣೆ ಮಾಡುವಂತೆ ಸೂಚಿಸಲಾಗಿದೆ.

ಮುಂದಿನ ವಾರ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಇದಕ್ಕಾಗಿ ಕಂದಾಯ, ವಿಪತ್ತು ನಿರ್ವಹಣೆ, ಅರಣ್ಯ ಇಲಾಖೆ, ಇಂಧನ, ನೀರಾವರಿ ಸೇರಿದಂತೆ ಎಲ್ಲ ಇಲಾಖೆಗಳು ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ ಎಂದರು.ಸಚಿವೆ ಲಕ್ಷ್ಮಿ ಹೆಬ್ಬಾಳಕರ್, ಬೆಳಗಾವಿ ಜಿಲ್ಲೆಯ ಶಾಸಕರು ಮತ್ತಿತರ ಗಣ್ಯರು ಉಪಸ್ಥಿತರಿದ್ದರು..

ದಿನನಿತ್ಯದ ಇನ್ನೂ ಹೆಚ್ಚಿನ ಮಾಹಿತಿಗಾಗಿ ತಪ್ಪದೆ ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ….

ಕೃಷಿ ವಾಹಿನಿ ವಾಟ್ಸಪ್ ಗ್ರೂಪ್ ಸೇರಲು ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ 👇🏻

https://chat.whatsapp.com/D6bfj7BBl7lLxTGZOcd2Mh

Leave a Reply

Your email address will not be published. Required fields are marked *