Importance of Bele samikshe :- ರೈತರು ಮೊಬೈಲ್ ಅಪ್ಲಿಕೇಶನ್ ಮೂಲಕ 2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಮಾಡಲು ಕೃಷಿ ಇಲಾಖೆ ಸೂಚನೆ ನೀಡಿತ್ತು. ಈಗ ರೈತರ ಅನುಕೂಲಕ್ಕಾಗಿ ಬೆಳೆ ಸಮೀಕ್ಷೆಯ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಬೆಳೆ ಸಮೀಕ್ಷೆ ಯೋಜನೆಯಡಿ ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ಬೆಳೆಗಳ ಛಾಯಾ ಚಿತ್ರಗಳನ್ನು ತಾವೇ ಸ್ವತಃ ಅಥವಾ ಸ್ಥಳೀಯ ಖಾಸಗಿ ನಿವಾಸಿಗಳ ಸಹಾಯದೊಂದಿಗೆ ಅಪ್‌ಲೋಡ್ ಮಾಡಲು ಅವಕಾಶವಿದೆ.
< ಬೆಳೆ ಹಾನಿ ಸಮಯದಲ್ಲಿ ಈ ಸಮೀಕ್ಷೆ ಮಹತ್ವದ್ದಾಗಿದೆ.
ಬೆಳೆ ಸಮೀಕ್ಷೆ ಅವಧಿಯನ್ನು ವಿಸ್ತರಣೆ ಮಾಡುವ ಕುರಿತು ಪಿ. ಸತ್ಯಭಾಮ, ಸರ್ಕಾರದ ಅಧೀನ ಕಾರ್ಯದರ್ಶಿ, ಕೃಷಿ ಇಲಾಖೆ (ಯೋಜನೆ) ಆದೇಶವನ್ನು ಹೊರಡಿಸಿದ್ದಾರೆ. 2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯದ ಅವಧಿಯನ್ನು ವಿಸ್ತರಿಸುವ ಬಗ್ಗೆ ಎಂಬ ವಿಷಯವನ್ನು ಆದೇಶ ಒಳಗೊಂಡಿದೆ.
ಹಲವು ಪ್ರಸ್ತಾವನೆಯನ್ನು ಪರಿಶೀಲಿಸಿದೆ. ಸದರಿ ಪ್ರಸ್ತಾವನೆಯಲ್ಲಿ ಕೋರಿರುವಂತೆ 2024-25ನೇ ಸಾಲಿನ ಮುಂಗಾರು ಹಂಗಾಮಿನ ಖಾಸಗಿ ನಿವಾಸಿಗಳ ಬೆಳೆ ಸಮೀಕ್ಷೆ ಕಾರ್ಯದ ಅವಧಿಯನ್ನು ದಿನಾಂಕ 15-1-2024 ರವರೆಗೆ ವಿಸ್ತರಿಸಲು ಅನುಮತಿ ನೀಡಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ರೈತರೇ ದಾಖಲಿಸಬಹುದು:- ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯವನ್ನು ರೈತರೇ ಸುಲಭವಾಗಿ ಮೊಬೈಲ್ ಮೂಲಕ ಮಾಡಬಹುದು. ಬೆಳೆ ಸಮೀಕ್ಷೆ ಯೋಜನೆಯಡಿ ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ಬೆಳೆಗಳ ಚಿತ್ರಗಳನ್ನು ತಾವೇ ಸ್ವತಃ ಅಥವಾ ಸ್ಥಳೀಯ ಖಾಸಗಿ ನಿವಾಸಿಗಳ ಸಹಾಯದೊಂದಿಗೆ ಅಪ್‌ಲೋಡ್ ಮಾಡಬಹುದು. ಈ ಕುರಿತು ಕೃಷಿ ಇಲಾಖೆ ರೈತರಿಗೆ ಅರಿವು ಮೂಡಿಸುವ ಕಾರ್ಯವನ್ನು ಸಹ ಮಾಡಿದೆ.
ರೈತರೇ ಸಮೀಕ್ಷ ಮಾಡಲು ಅವಕಾಶವಿರುವುದರಿಂದ ರೈತರಿಗೆ ನಂಬಿಕೆ ಬರುವುದರ ಜೊತೆಗೆ ತಾವು ಬೆಳೆದ ಬೆಳೆಗಳ ನಿಖರವಾದ ಮಾಹಿತಿ ದಾಖಲಿಸುವ ಮೂಲಕ ಸಾರ್ಕರದಿಂದ ಬರುವ ಎಲ್ಲಾ ಸವಲತ್ತುಗಳನ್ನು ಪಡೆದುಕೊಳ್ಳಬಹುದಾಗಿದೆ. ಇತರೆ ಯೋಜನೆಗಳಾದ ಬೆಂಬಲ ಬೆಲೆ, ಸಬ್ಸಿಡಿ ಪಾವತಿ, ಬೆಳೆ ಪ್ರದೇಶದ ಅಂದಾಜು, ಬೆಳೆ ವಿಮೆ ಮತ್ತು ಕೃಷಿ ಇಲಾಖೆಯ ಇತರೆ ಯೋಜನೆಗಳಡಿ ಫಲಾನುಭವಿಗಳ ಆಯ್ಕೆ ಮುಂತಾದವುಗಳಿಗೆ ಸಹ ಬೆಳೆ ಸಮೀಕ್ಷೆ ಸಹಕಾರಿಯಾಗಲಿದೆ.
ಬೆಳೆ ಸಮೀಕ್ಷೆಯಿಂದಾಗಿ ಪಹಣಿಗಳಲ್ಲಿ ಸರಿಯಾದ ಬೆಳೆ ಮಾಹಿತಿ ದಾಖಲಿಸಬಹುದಾಗಿದೆ. ಜೊತೆಗೆ ವಿವಿಧ ಬೆಳೆಗಳ ನಿಖರವಾದ ಬೆಳೆಗಳ ವಿಸ್ತೀರ್ಣ ಮಾಹಿತಿಯನ್ನು ಸಹ ಬೆಳೆ ಸಮೀಕ್ಷೆಯಿಂದ ಪಡೆದುಕೊಳ್ಳಬಹುದಾಗಿದೆ.
ಆದ್ದರಿಂದ ಈ ಯೋಜನೆಯು ರೈತರಿಗೆ ಅನುಕೂಲವಾಗಿದೆ.
ರೈತರು ಬೆಳೆ ವಿವರಗಳನ್ನು ದಾಖಲು ಮಾಡಲು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಫಾಮರ್ಸ್ ಕ್ರಾಪ್ ಸರ್ವೆ ಎನ್ನುವ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಳ್ಳಬೇಕು.
https://play.google.com/store/apps/details?id=com.csk.farmer23_24.cropsurvey
ಬಳಿಕ ಬೆಳೆ ಸಮೀಕ್ಷೆಯ ವರ್ಷ ಮತ್ತು ಹಂಗಾಮನ್ನು ನಮೂದಿಸಬೇಕು. ರೈತರು ತಮ್ಮ ಹೆಸರು, ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು. ಬಳಿಕ ಮೊಬೈಲ್ ಸಂಖ್ಯೆಗೆ ಬರುವ ಓಟಿಪಿಯನ್ನು * ದಾಖಲಿಸಿ ಅಪ್ಲಿಕೇಶನ್‌ನಲ್ಲಿ ರಿಜಿಸ್ಟರ್ ಮಾಡಿಕೊಳ್ಳಬೇಕು. >
ಮೊಬೈಲ್ ಅಪ್ಲಿಕೇಶನ್‌ನಲ್ಲಿ ಮಾಸ್ಟರ್, ಪಹಣಿ ಮತ್ತು ಮಾಲೀಕರ ವಿವರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ತಮ್ಮ ಜಿಲ್ಲೆ, ತಾಲೂಕು, ಗ್ರಾಮವನ್ನು ಆಯ್ಕೆ ಮಾಡಿಕೊಂಡು ತಮ್ಮ ಜಮೀನಿನ ವಿವರಗಳನ್ನು ದಾಖಲಿಸಬೇಕು. ಬೆಳೆ ವಿವರಗಳನ್ನು ದಾಖಲಿಸಿ ಜಮೀನಿನಲ್ಲಿರುವ ಮೂರು ಛಾಯಾಚಿತ್ರಗಳನ್ನು ತೆಗೆಯಬೇಕು.
ಇಂಟರನೆಟ್ ಸಂಪರ್ಕ ಇರುವುದನ್ನು ಖಚಿತಪಡಿಸಿಕೊಂಡು ಬೆಳೆ ಸಮೀಕ್ಷೆಯ ವಿವರಗಳನ್ನು ಅಪ್‌ಲೋಡ್ ಮಾಡಬೇಕು. ಹೆಚ್ಚಿನ ಮಾಹಿತಿಗೆ ಕೃಷಿ, ಕಂದಾಯ ತೋಟಗಾರಿಕೆ, ರೇಷ್ಮೆ ಇಲಾಖೆಗಳನ್ನು ಸಂಪರ್ಕಿಸಬಹುದಾಗಿದೆ
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ ತಪ್ಪದೇ ಈ ಲೇಖನವನ್ನು ಸಂಪೂರ್ಣವಾಗಿ ಓದಿ ಎಲ್ಲರಿಗೂ ಶೇರ್ ಮಾಡಿ 🙏🏻
ಕೃಷಿ ವಾಹಿನಿ ವಾಟ್ಸಪ್ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ 👇🏻
https://chat.whatsapp.com/D6bfj7BBl7lLxTGZOcd2Mh